ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್‌ಟಿಡಿಸಿ ಕ್ಯಾಬ್ ಚಾಲಕ ಪ್ರತಾಪ್ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್ ಅವರ ಸಾವಿನೊಂದಿಗೆ ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ. 1/4
ಸರ್ಕಾರ ದರ ಸಮರದತ್ತ ಕೂಡಲೇ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ. 4/4