ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರ ಸ್ಥಳೀಯ ಸಂಸ್ಥೆ: ಇಂದು ಮತ ಎಣಿಕೆ

Last Updated 29 ಡಿಸೆಂಬರ್ 2021, 18:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 5 ನಗರ ಸಭೆಗಳು ಸೇರಿ ಅವಧಿಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 59 ಗ್ರಾಮ ಪಂಚಾ ಯಿತಿಗಳಿಗೆ ಸೋಮವಾರ ನಡೆದ ಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಲಿದೆ.

ಮತಗಳ ಎಣಿಕೆ ಬೆಳಿಗ್ಗೆ 8ಕ್ಕೆ ಆಯಾ ನಗರ ಸ್ಥಳೀಯ ಸಂಸ್ಥೆಗಳ ಕೇಂದ್ರ ಸ್ಥಾನದಲ್ಲೇ ನಡೆಯಲಿದೆ. ಚಿಕ್ಕಮಗಳೂರು, ತುಮಕೂರು ಜಿಲ್ಲೆಯ ಶಿರಾ, ಗದಗ–ಬೆಟಗೇರಿ, ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ, ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರಸಭೆಗಳು, ವಿವಿಧ ಜಿಲ್ಲೆಗಳ 19 ಪುರಸಭೆಗಳು ಮತ್ತು 34 ಪಟ್ಟಣ ಪಂಚಾಯಿತಿಗಳಿಗೆ ಮತಎಣಿಕೆ ನಡೆಯುತ್ತಿದೆ. 1,185 ವಾರ್ಡ್‌ಗಳಲ್ಲಿ 4,961 ಅಭ್ಯರ್ಥಿ ಗಳು ಚುನಾವಣೆ ಎದುರಿಸಿದ್ದಾರೆ. ಅಲ್ಲದೆ, ನಗರ ಸ್ಥಳೀಯ ಸಂಸ್ಥೆಗಳ 9 ವಾರ್ಡ್‌ಗಳಿಗೆ ಮತ್ತು ವಿವಿಧ ಗ್ರಾಮ ಪಂಚಾಯಿತಿಗಳ 401 ಸ್ಥಾನಗಳಿಗೂ ಉಪಚುನಾವಣೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT