ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 57 ಗ್ರಾಮ ಪಂಚಾಯಿತಿಗಳ ಸದಸ್ಯರ ಆಯ್ಕೆಗೆ ಸೋಮವಾರ ಚುನಾವಣೆ ನಡೆದಿದ್ದು, ಸಣ್ಣ ಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಬಹುತೇಕ ಶಾಂತಿಯುತ ಮತದಾನ ನಡೆದಿದೆ.

ಮತದಾನದ ಅಂಕಿಅಂಶ ಖಚಿತ ಮಾಹಿತಿ ರಾಜ್ಯ ಚುನಾವಣಾ ಆಯೋಗಕ್ಕೆ ಲಭಿಸಿಲ್ಲ. ಸೋಮವಾರ ತಡರಾತ್ರಿಯೂ ವಿವಿಧ ಜಿಲ್ಲೆಗಳಿಂದ ಮಾಹಿತಿ ಸಂಗ್ರಹಿಸುವ ಕೆಲಸವನ್ನು ಆಯೋಗದ ಅಧಿಕಾರಿಗಳು ಮುಂದುವರಿಸಿದ್ದರು.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪುರಸಭೆಯ ವ್ಯಾಪ್ತಿಯಲ್ಲಿ ಶಾಸಕ ಎಸ್. ಭೀಮಾ ನಾಯ್ಕ ಮತ್ತು ಮಾಜಿ ಶಾಸಕ ಕೆ. ನೇಮಿರಾಜ ನಾಯ್ಕ ನಡುವೆ ಮಾತಿನ ಚಕಮಕಿ ನಡೆಯಿತು. ಇಬ್ಬರ ಬೆಂಬಲಿಗರೂ ಕೈ ಮಿಲಾಯಿಸುವ ಹಂತ ತಲುಪಿದ್ದರು. ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.

ತುಮಕೂರು ಜಿಲ್ಲೆ ಶಿರಾ ನಗರಸಭೆ ಚುನಾವಣೆಯಲ್ಲಿ ನಕಲಿ ಮತದಾನಕ್ಕೆ ಯತ್ನಿಸಿದ ಒಬ್ಬನನ್ನು ಹಾಗೂ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಾಪುರ ಪುರಸಭೆ ಚುನಾವಣೆಯಲ್ಲಿ ನಕಲಿ ಮತದಾನಕ್ಕೆ ಯತ್ನಿಸಿದ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ಪುರಸಭೆಯ ಕಲ್ಲುಗೋಪಹಳ್ಳಿ ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಕೈ ಮಿಲಾಯಿಸಿಕೊಂಡರಲ್ಲದೇ ಪರಸ್ಪರ ಕಲ್ಲು ತೂರಾಡಿಕೊಂಡರು.

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಜಿಗಳೂರ ಗ್ರಾಮಸ್ಥರು ಹಾಗೂ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕುಟುಕನಕೇರಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.