ಬೆಂಗಳೂರು: ತನ್ನ ವ್ಯಾಪ್ತಿಯಲ್ಲಿರುವ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬದಲು ಮತಚೀಟಿ (ಬ್ಯಾಲಟ್ ಪೇಪರ್) ಬಳಕೆ ಹಾಗೂ ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ‘ಮತಕಳ್ಳತನ’ದ ಆರೋಪ ಹೊರಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ತಮ್ಮ ಪಕ್ಷದ ನೇತಾರನ ಮಹಾ ಸಮರಕ್ಕೆ ಬೆಂಬಲ ಸೂಚಿಸುವ ರೀತಿಯೊಳಗೆ, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್, ಕೇಂದ್ರಕ್ಕೆ ಸಡ್ಡು ಹೊಡೆಯುವತ್ತ ಹೊಸ ಹೆಜ್ಜೆ ಇಟ್ಟಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ವೂ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳಿಗೆ ಹೊಸ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕಾರ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದರು.

ಈ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಬದಲಿಗೆ ಮತ ಪತ್ರ (ಬ್ಯಾಲಟ್ ಪೇಪರ್) ಬಳಸಿ ಮತ ಚಲಾಯಿಸುವ ವ್ಯವಸ್ಥೆಯನ್ನು ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಇವೆರಡೂ ವಿಷಯಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗುವುದು. ಮತದಾರರ ಪಟ್ಟಿ ಪರಿಷ್ಕರಿಸಿ, ಹೊಸ ಪಟ್ಟಿ ತಯಾರಿಸಲು ಕಾಯ್ದೆಗೆ ಅಗತ್ಯ ತಿದ್ದುಪಡಿಗಳನ್ನು ಮಾಡಿ ಹೊಸ ನಿಯಮಾವಳಿಗಳನ್ನು ರೂಪಿಸಲಾಗುವುದು’ ಎಂದರು.

ಅಲ್ಲದೇ ‘ ಇನ್ನು 15 ದಿನಗಳಲ್ಲಿ ನಿಯಮಗಳನ್ನು ಅಂತಿಮಗೊಳಿಸಿ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಹೇಳಿದರು.

‘ಕೇಂದ್ರ ಚುನಾವಣಾ ಆಯೋಗ ತಯಾರಿಸಿರುವ ಮತದಾರರ ಪಟ್ಟಿಯಲ್ಲಿ ವ್ಯಾಪಕ ಅಕ್ರಮವಾಗಿದೆ. ‘ಮತ ಕಳ್ಳತನ’ವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಬಂದಿದೆ. ಇತ್ತೀಚೆಗೆ ಕರ್ನಾಟಕದಲ್ಲೂ ಮತದಾರರ ಪಟ್ಟಿಯಲ್ಲಿ ಬಹು ದೊಡ್ಡ ಪ್ರಮಾದ ಆಗಿದೆ ಎಂದು ಜನರು ದೂರಿದ್ದಾರೆ. ಮತದಾರ ಅಲ್ಲದವರನ್ನೂ ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. ಮತಕಳ್ಳತನ ವಿಚಾರವಾಗಿ ವ್ಯಾಪಕ ಚರ್ಚೆ ನಡೆಯುತ್ತಿದೆ’ ಎಂದು ಅವರು ವಿವರಿಸಿದರು.

‘ದೇಶದಲ್ಲಿ ವಿದ್ಯುನ್ಮಾನ ಮತ ಯಂತ್ರದ (ಇವಿಎಂ) ಬಗ್ಗೆಯೂ ಜನರಲ್ಲಿ ವಿಶ್ವಾಸವಿಲ್ಲ. ಅದರ ವಿಶ್ವಾಸಾರ್ಹತೆಯ ಕೊರತೆಯನ್ನು ಗಮನಿಸಿ, ನಾವು ಜನರ ಮನಃಸ್ಥಿತಿಗೆ ಅನುಗುಣವಾಗಿ ಇವಿಎಂ ಬದಲು ಬ್ಯಾಲೆಟ್ ವ್ಯವಸ್ಥೆ ಜಾರಿ ತರಲು ತೀರ್ಮಾನಿಸಿದ್ದೇವೆ’ ಎಂದು ಹೇಳಿದರು.

ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಅವರು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಸೆಕ್ಷನ್ 35 ಅನ್ನು ಉಲ್ಲೇಖಿಸಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು. ಅದರ ಆಧಾರದ ಮೇರೆಗೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪಂಚಾಯತ್ರಾಜ್ ಕಾಯ್ದೆ, ಮುನಿಸಿಪಾಲಿಟಿ ಕಾಯ್ದೆಯಲ್ಲೂ ಈ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ, ಕೇಂದ್ರ ಚುನಾವಣಾ ಆಯೋಗದಂತೆ ರಾಜ್ಯ ಚುನಾವಣಾ ಆಯೋಗವೂ ಸ್ವಾಯತ್ತ ಸಂಸ್ಥೆ. ಕೇಂದ್ರ ಚುನಾವಣಾ ಆಯೋಗದಷ್ಟೇ ರಾಜ್ಯ ಚುನಾವಣಾ ಆಯೋಗಕ್ಕೂ ಅಧಿಕಾರ ಇದೆ. ಮತದಾರರ ಪಟ್ಟಿಯನ್ನೂ ಸ್ವತಂತ್ರವಾಗಿ ತಯಾರಿಸಬಹುದಾಗಿದೆ ಎಂದು ಅವರು ಹೇಳಿದರು.

2010 ಮತ್ತು 2015ರಲ್ಲಿ ನಡೆದ ಬಿಬಿಎಂಪಿ ಚುನಾವಣೆಗಳಲ್ಲಿ ಇವಿಎಂಗಳನ್ನು ಬಳಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಇವಿಎಂಗಳನ್ನು ಬಳಸಲಾಗುತ್ತಿತ್ತು. ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಮತಪತ್ರ ಬಳಸಲಾಗುತ್ತಿದೆ. ವಿಧಾನಪರಿಷತ್ ಚುನಾವಣೆಗಳಲ್ಲಿ ಮತಪತ್ರಗಳನ್ನು ಬಳಸಲಾಗುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.