ಬೆಂಗಳೂರು: ಈ ವರ್ಷ ಮುಂಗಾರು ಬೇಗ ಆರಂಭವಾಗಿದ್ದರಿಂದ ಮತ್ತು ಸುಮಾರು 2 ಲಕ್ಷ ಹೆಕ್ಟೇರ್ ಮುಸುಕಿನ ಜೋಳ ಪ್ರದೇಶ ವಿಸ್ತರಣೆಯಾದ ಕಾರಣ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಯಿತು. ಇದರಿಂದ ಐದಾರು ಜಿಲ್ಲೆಗಳಲ್ಲಿ ಸಮಸ್ಯೆ ಆಗಿದೆ. ಉಳಿದಂತೆ ಎಲ್ಲಿಯೂ ರಸಗೊಬ್ಬರ ಕೊರತೆ ಆಗಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ನಮ್ಮ ಬೇಡಿಕೆಗಿಂತ ಹೆಚ್ಚಿನ ದಾಸ್ತಾನು ಲಭ್ಯವಿದೆ. ಜುಲೈ ತಿಂಗಳ ಬೇಡಿಕೆಗೆ ಅನುಗುಣವಾಗಿ ವಿತರಣೆ ಮಾಡಿದ ಬಳಿಕವೂ ದಾಸ್ತಾನು ಉಳಿಕೆ ಇದೆ. ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರದ ಕೊರತೆ ಕಂಡುಬಂದರೆ, ಉಳಿಕೆಯಿಂದ ಹೆಚ್ಚುವರಿಯಾಗಿರುವ ಜಿಲ್ಲೆಗಳಿಂದ ಮರುವಿಂಗಡಣೆ ಮಾಡಿ, ಸರಬರಾಜು ಮಾಡಲಾಗುವುದು’ ಎಂದರು.

ಕೆಲವು ರೈತರು ಆತಂಕದಿಂದ ಆಗಸ್ಟ್– ಸೆಪ್ಟೆಂಬರ್ವರೆಗೆ ಬೇಕಾದ ಗೊಬ್ಬರವನ್ನು ಈಗಲೇ ಖರೀದಿಸಲು ಮುಂದಾಗಿರುವುದೂ ಸಹ ತಕ್ಷಣ ಬೇಡಿಕೆ ಹೆಚ್ಚಲು ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟರು.

ಜುಲೈ ತಿಂಗಳವರೆಗೆ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 5,34,009 ಟನ್ ರಸಗೊಬ್ಬರ ಹಂಚಿಕೆಯಾಗಿದೆ. ಇದರಲ್ಲಿ ಈವರೆಗೆ 4,30,633 ಟನ್ ಸರಬರಾಜಾಗಿದೆ. ಏಪ್ರಿಲ್ನಿಂದ ಜುಲೈವರೆಗೆ ರಾಜ್ಯದಲ್ಲಿ 6,80,655 ಟನ್ ಯೂರಿಯಾ ಬೇಡಿಕೆ ಇದ್ದು, ಕೇಂದ್ರ ಸರ್ಕಾರದಿಂದ 6,82,500 ಟನ್ ಹಂಚಿಕೆಯಾಗಿದೆ. ಇದರಲ್ಲಿ 5,26,817 ಟನ್ ಸರಬರಾಜಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಉಳಿಕೆಯಾಗಿದ್ದ 3,46,499 ಟನ್ ಯೂರಿಯಾ ದಾಸ್ತಾನು ಇದ್ದು, ಕೇಂದ್ರದಿಂದ ಸರಬರಾಜಾದ ಯೂರಿಯಾ ಸೇರಿ 8,73,315 ಟನ್ ಲಭ್ಯತೆ ಇತ್ತು. ಇದರಲ್ಲಿ 7,08,859 ಟನ್ ಯೂರಿಯಾವನ್ನು ವಿವಿಧ ಜಿಲ್ಲೆಗಳಿಗೆ ವಿತರಿಸಿದ್ದು, ರೈತರಿಗೂ ಮಾರಾಟ ಮಾಡಲಾಗಿದೆ. ಇನ್ನು 1,64,567 ಟನ್ ಯೂರಿಯಾ ದಾಸ್ತಾನು ಉಳಿಕೆಯಿದೆ. ಅಲ್ಲದೇ, ಕೇಂದ್ರದಿಂದ ಹಂತ ಹಂತವಾಗಿ ಪೂರೈಕೆಯಾಗುವ ರಸಗೊಬ್ಬರವನ್ನು ಆಗಿಂದಾಗಲೇ ಹಂಚಿಕೆ ಮಾಡಿ ವರ್ಗಾವಣೆ ಮಾಡಲಾಗುವುದು ಎಂದು ಅವರು ಹೇಳಿದರು.

ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾವನ್ನು ಶೀಘ್ರವೇ ಪೂರೈಕೆ ಮಾಡುವಂತೆ ಮುಖ್ಯಮಂತ್ರಿಯವರು ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ನ್ಯಾನೊ ಯೂರಿಯಾ ಬಳಕೆ ಮಾಡಿ

ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ನ್ಯಾನೊ ಯೂರಿಯಾ ಲಭ್ಯವಿದೆ. ಇದು ಹೆಚ್ಚು ಪರಿಣಾಮಕಾರಿ ಮತ್ತು ಲಾಭದಾಯಕ ಎಂಬುದು ಕೃಷಿ ಇಲಾಖೆ ಕೃಷಿ ವಿಶ್ವವಿದ್ಯಾಲಯಗಳು ಮತ್ತು ರೈತರು ನಡೆಸಿದ ಪ್ರಯೋಗಗಳಿಂದ ಸಾಬೀತಾಗಿದೆ. ಇದರಿಂದ ಉಳಿತಾಯ ಕೂಡ ಆಗಲಿದೆ. ಆದ್ದರಿಂದ ಕೃಷಿಕರು ನ್ಯಾನೊ ಯೂರಿಯಾ ಬಳಕೆ ಬಗ್ಗೆ ಗಮನಹರಿಸಬೇಕು ಎಂದು ಚಲುವರಾಯಸ್ವಾಮಿ ಹೇಳಿದರು. ಅತಿಯಾದ ರಸಗೊಬ್ಬರ ಬಳಕೆ ಭೂಮಿಯ ಫಲವತ್ತತೆ ಮತ್ತು ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮುಂದಿನ ಜನಾಂಗದ ಭವಿಷ್ಯದ ದೃಷ್ಟಿಯಿಂದ ರಸಗೊಬ್ಬರಗಳ ಬಳಕೆ ಕಡಿಮೆ ಮಾಡಿ ಹಸಿರು ಗೊಬ್ಬರ ಜೈವಿಕ ಗೊಬ್ಬರಗಳ ಬಳಕೆ ಹೆಚ್ಚಿಸುವುದು ಅಗತ್ಯವಿದೆ. ಈ ಬಗ್ಗೆಯೂ ರೈತರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು ಶೇ 75 ರಷ್ಟು ಬಿತ್ತನೆಯಾಗಿದೆ. ಶೇ 100 ರಷ್ಟು ಗುರಿ ಸಾಧನೆ ನಿರೀಕ್ಷೆ ಹೊಂದಲಾಗಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.