ಬೆಂಗಳೂರು: ತರಕಾರಿ ಮತ್ತು ಇತರ ತ್ಯಾಜ್ಯ ಬಳಕೆ ಮಾಡಿ ಬಯೋ ಸಿಎನ್ಜಿ ಪ್ಲಾಂಟ್ಗಳ ಸ್ಥಾಪನೆಗೆ ಕೇಂದ್ರ ಸರ್ಕಾರದ ಕಾರ್ಬನ್ ಕ್ರೆಡಿಟ್ಸ್ (ಇಂಗಾಲದ ಆದಾಯ) ಅನುದಾನವನ್ನು ಬಳಕೆ ಮಾಡುವ ಕುರಿತಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಜೊತೆ ದೆಹಲಿಯ ಕೊಸ್ಯಾಂಬೋ (ಕೌನ್ಸಿಲ್ ಆಫ್ ಸ್ಟೇಟ್ ಅಗ್ರಿಕಲ್ಟರ್ ಮಾರ್ಕೆಟಿಂಗ್ ಡಿಪಾರ್ಟ್ಮೆಂಟ್) ವ್ಯವಸ್ಥಾಪಕ ನಿರ್ದೇಶಕ ಜೆ.ಎಸ್. ಯಾದವ್ ಅವರು ಸೋಮವಾರ ಚರ್ಚೆ ನಡೆಸಿದರು.

ಬೆಂಗಳೂರಿನ ದಾಸನಪುರ, ಮೈಸೂರು ಮತ್ತು ಕೋಲಾರದಲ್ಲಿ ಈಗಾಗಲೇ ಬಯೋ ಸಿಎನ್ಜಿ ಪ್ಲಾಂಟ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಶಿವಾನಂದ ಪಾಟೀಲ ಅವರು ಯಾದವ್ ಅವರ ಗಮನಕ್ಕೆ ತಂದರು.

ಘನತ್ಯಾಜ್ಯ ನಿರ್ವಹಣೆ ಕಾಯ್ದೆಗೆ ಕೇಂದ್ರ ಸರ್ಕಾರ ಅಕ್ಟೋಬರ್ನಲ್ಲಿ ತಿದ್ದುಪಡಿ ತರಲಿದೆ. ಈ ಮೂಲಕ ಲಭ್ಯವಾಗುವ ನೆರವನ್ನು ಬಳಕೆ ಮಾಡಿಕೊಂಡು ಎಪಿಎಂಸಿಗಳಲ್ಲಿ ಬಯೋ ಗ್ಯಾಸ್ ಪ್ಲಾಂಟ್ಗಳನ್ನು ನಿರ್ಮಾಣ ಮಾಡಬಹುದು ಎಂದು ಯಾದವ್ ಸಲಹೆ ನೀಡಿದರು.

ಅತಿ ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುವ ಬೆಂಗಳೂರು, ಮೈಸೂರು ಮತ್ತು ಕೋಲಾರದಲ್ಲಿ ಈ ಯೋಜನೆ ಆರಂಭಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಹಣ್ಣುಗಳ ಪ್ಯಾಕಿಂಗ್ಗೆ ಹಾನಿಕಾರಕ ರಾಸಾಯನಿಕ ಬಳಕೆ, ಸೇಬು ಸೇರಿದಂತೆ ಇತರ ಹಲವು ಹಣ್ಣುಗಳ ಬ್ರಾಂಡ್ಗಳನ್ನು ಗುರುತಿಸಲು ಅವುಗಳ ಮೇಲೆ ಸ್ಟಿಕ್ಕರ್ಗಳನ್ನು ಹಚ್ಚುವುದು ಅಪಾಯಕಾರಿ. ಇಂತಹ ಹಣ್ಣುಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಈ ಬಗ್ಗೆ ವರ್ತಕರಲ್ಲಿ ಜಾಗೃತಿ ಮೂಡಿಸಬೇಕು. ತರಕಾರಿಗೆ ಕೃತಕ ಬಣ್ಣ ಬಳಕೆ ಮತ್ತು ಸಾಧ್ಯವಾದಷ್ಟು ಕಡಿಮೆ ಪ್ರಮಾಣದಲ್ಲಿ ಕೀಟನಾಶಕ ಬಳಸುವ ಬಗ್ಗೆ ಜಾಗೃತಿ ಮೂಡಿಸುವ ಕುರಿತು ಕೂಡ ಚರ್ಚೆ ನಡೆಯಿತು.

ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕ ಶಿವಾನಂದ ಕಾಪಸೆ, ಸೂಪರಿಂಟೆಂಡೆಂಟ್ ಎಂಜಿನಿಯರ್ ರಘುನಂದನ್, ಕರ್ನಾಟಕ ಕೃಷಿ ಮಾರಾಟ ಮಹಾ ಮಂಡಳದ ಮುಖ್ಯ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ್ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.