ಜೊಯಿಡಾ: ‘ದಲಿತರ ಕೈಯಲ್ಲಿ ಅಧಿಕಾರವಿದ್ದರೆ ಮಾತ್ರ ಅಂಬೇಡ್ಕರ್ ಅವರ ಸಂವಿಧಾನ ಜಾರಿ ಸಾಧ್ಯ. ಭಾರತದ ಪ್ರತಿಯೊಬ್ಬರಿಗೂ ಸಂವಿಧಾನವೇ ಆಧಾರವಾಗಿದ್ದು, ಇಂದು ವಿದ್ಯಾವಂತರಿಂದಲೇ ಅಂಬೇಡ್ಕರ್ ಅವರ ಆಶಯಗಳಿಗೆ ಮೋಸವಾಗುತ್ತಿದೆ’ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ರಾಜು ತಳವಾರ ಹೇಳಿದರು.

ಜೊಯಿಡಾ ತಾಲ್ಲೂಕಿನ ಉಳವಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಮಾರ್ಗ) ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ನಡೆದ ಅಂಬೇಡ್ಕರ್ ಅವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಳವಿ ಚನ್ನಬಸವೇಶ್ವರ ದೇವಸ್ಥಾನ ಮುಖ್ಯ ಅರ್ಚಕ ಶಂಕ್ರಯ್ಯ ಕಲ್ಮಠ ಶಾಸ್ತ್ರಿ ಮಾತನಾಡಿ, ‘ಜಾತಿ ಧರ್ಮ ಭೇದವಿಲ್ಲದ ಮಾನವ ಧರ್ಮವೇ ಶ್ರೇಷ್ಠ. ಬೇಡುವುದಕ್ಕಿಂತ ನೀಡುವ ಶಕ್ತಿ ಪಡೆಯಬೇಕು, ಅಂಬೇಡ್ಕರ್ ಅವರ ಜೀವನದ ಬಗ್ಗೆ ಪ್ರತಿ ಮಗುವಿನಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕು’ ಎಂದರು.

ಶಿವಪುರದ ಗೋಪಾಲ ಭಟ್ಟ ಮಾತನಾಡಿ, ‘ಎಲ್ಲರೂ ಶಿಕ್ಷಣ ಪಡೆದಾಗ ಮಾತ್ರ ಅಂಬೇಡ್ಕರ್ ಅವರ ತತ್ವಗಳಿಗೆ ಬೆಲೆ ಬರುತ್ತದೆ’ ಎಂದರು.

ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಭೀಮಾಶಂಕರ ಹರಿಜನ ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು.

ಶಿವಪುರದ ಚನ್ನಬಸವನಂದ ಸ್ವಾಮೀಜಿ, ಶ್ರೀಕಾಂತ ಚಲವಾದಿ ಮಾತನಾಡಿದರು. ಚನ್ನಬಸವೇಶ್ವರ ದೇವಸ್ಥಾನದ ಮುಖ್ಯದ್ವಾರದಿಂದ ವೇದಿಕೆಯವರೆಗೆ ಜೊಯಿಡಾ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಶ್ರೀಕಾಂತ ಕಾಂಬಳೆ ಅಧ್ಯಕ್ಷತೆಯಲ್ಲಿ ಭವ್ಯ ಮೆರವಣಿಗೆ ನಡೆಯಿತು.

ಉಳವಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಮೊಕಾಶಿ ಅಧ್ಯಕ್ಷತೆ ವಹಿಸಿದ್ದರು. ಭಾಸ್ಕರ್ ಗಾಂವಕರ ನಿರೂಪಿಸಿದರು, ಪ್ರಸನ್ನ ಎಚ್ ಸ್ವಾಗತಿಸಿದರು, ಫಕಿರಪ್ಪ ಎಸ್.ಬಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-20-1103683112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.