ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು(ಯುವಿಸಿಇ) ಬಿ.ಟೆಕ್ ಹಾಗೂ ಎಂ.ಟೆಕ್ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಅತಿಥಿ ಉಪನ್ಯಾಸಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಎಐಸಿಟಿಇ/ಯುಜಿಸಿ ನಿಯಮಗಳಿಗೆ ಅನುಸಾರವಾಗಿ ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ವಿಷಯಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಯುವಿಸಿಇ ಜಾಲತಾಣಕ್ಕೆ ಭೇಟಿ ನೀಡಬಹುದು.

ಆಸಕ್ತ ಅರ್ಹ ಅಭ್ಯರ್ಥಿಗಳು www.uvce.karnataka.gov.in ಜಾಲತಾಣದಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಸಂಬಂಧಿತ ದಾಖಲಾತಿಗಳೊಂದಿಗೆ ಕುಲಸಚಿವರು, ಯುವಿಸಿಇ, ಕೆ.ಆರ್.ವೃತ್ತ,ಬೆಂಗಳೂರು ಇಲ್ಲಿಗೆ ಕಳುಹಿಸಬೇಕು.

ಅರ್ಜಿ ಸಲ್ಲಿಸಲು ಜುಲೈ 19 ಕೊನೆ ದಿನ.

ವಿವರಗಳಿಗಾಗಿ ವಿಶ್ವವಿದ್ಯಾಲಯದಸಮನ್ವಯಾಧಿಕಾರಿ, ತಾಂತ್ರಿಕೇತರ ವಿಷಯ, ಇವರನ್ನು ಸಂಪರ್ಕಿಸಬಹುದು. ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.