ನವದೆಹಲಿ: ಜಲ ಜೀವನ್ ಮಿಷನ್ ಯೋಜನೆಯಡಿ ಕರ್ನಾಟಕ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ ಪ್ರಯೋಗಾಲಯಗಳಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಕುಡಿಯುವ ನೀರಿನ ಮಾದರಿಗಳಲ್ಲಿ ಗಣನೀಯ ಮಾಲಿನ್ಯ ಕಾರಕಗಳು ಪತ್ತೆಯಾಗಿವೆ ಎಂದು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಹಲವು ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ಕುಡಿಯುವ ನೀರಿನ ಮಾದರಿಗಳಲ್ಲಿ ಫ್ಲೋರೈಡ್, ಆರ್ಸೆನಿಕ್, ಕಬ್ಬಿಣ, ನೈಟ್ರೇಟ್, ಲವಣಾಂಶ ಮತ್ತು ಸೂಕ್ಷ್ಮಜೀವಿಯಂತಹ ಮಾಲಿನ್ಯಕಾರಕಗಳು ಕಂಡು ಬಂದಿವೆ. ಉತ್ತರ ಕರ್ನಾಟಕ ಹಾಗೂ ಬಯಲುಸೀಮೆಯ ಜಿಲ್ಲೆಗಳಲ್ಲಿ ಮಾಲಿನ್ಯಕಾರಕಗಳ ಪ್ರಮಾಣ ಜಾಸ್ತಿ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

‘ನೀರಿನ ಗುಣಮಟ್ಟದ ವರದಿಗಳ ಆಧಾರದಲ್ಲಿ ನಿಯಮಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ನೀರಿನ ಮಾದರಿಗಳನ್ನು ಪರೀಕ್ಷೆ ನಡೆಸಿ ಸೋಂಕು ನಿವಾರಕ ಹಾಕಲಾಗುತ್ತಿದೆ ಹಾಗೂ ಶುಚಿಗೊಳಿಸಲಾಗುತ್ತಿದೆ. ನೀರಿನ ಗುಣಮಟ್ಟ ಪರಿಶೀಲಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಗಳನ್ನು ರಚಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಅಮೃತ್ ಯೋಜನೆಯಡಿ ಜಿಯೋಸ್ಪೇಷಿಯಲ್ ದತ್ತಾಂಶಗಳನ್ನು ಬಳಸಿಕೊಂಡು ನೀರು ಹಾಗೂ ಒಳಚರಂಡಿ ಜಾಲಗಳ ಮ್ಯಾಪಿಂಗ್ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಇತ್ತೀಚೆಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.