ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರಿಷ್ಠರ ಭೇಟಿಗಾಗಿ ವಿ. ಸೋಮಣ್ಣ ದೆಹಲಿಗೆ

Published 8 ಜನವರಿ 2024, 15:21 IST
Last Updated 8 ಜನವರಿ 2024, 15:21 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಅವರು ನವದೆಹಲಿಗೆ ಸೋಮವಾರ ಬಂದಿದ್ದಾರೆ. ಅವರು ಪಕ್ಷದ ವರಿಷ್ಠರನ್ನು ಮಂಗಳವಾರ ಭೇಟಿ ಮಾಡುವ ಸಾಧ್ಯತೆ ಇದೆ. 

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಪಕ್ಷದ ಕೆಲವು ನಾಯಕರ ವಿರುದ್ಧ ಸೋಮಣ್ಣ ಮುನಿಸಿಕೊಂಡಿದ್ದರು. ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸೋಮಣ್ಣ ತಿಳಿಸಿದ್ದರು.

‘ನನ್ನ ಸೋಲಿಗೆ ಕಾರಣವಾದವರ ವಿರುದ್ಧ ಕ್ರಮ ಜರುಗಿಸುವುದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕರ್ತವ್ಯ. ಆ ಕೆಲಸ ಮಾಡದಿದ್ದರೆ ಸಿಡಿದೇಳುವೆ’ ಎಂದೂ ಅವರು ಎಚ್ಚರಿಸಿದ್ದರು. ಇದೀಗ ಸೋಮಣ್ಣ ಅಸಮಾಧಾನ ಶಮನ ಮಾಡಲು ರಾಷ್ಟ್ರೀಯ ನಾಯಕರು ಮುಂದಾಗಿದ್ದಾರೆ. ನವದೆಹಲಿಗೆ ಬರುವಂತೆ ರಾಷ್ಟ್ರೀಯ ನಾಯಕರು ಭಾನುವಾರ ಕರೆ ಮಾಡಿದ್ದರು ಎಂದು ಮೂಲಗಳು ಹೇಳಿವೆ. 

ಸೋಮಣ್ಣ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಮಂಗಳವಾರ ಭೇಟಿ ಮಾಡಿ ಸಮಾಲೋಚಿಸುವ ಸಾಧ್ಯತೆ ಇದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT