ಮಂಡ್ಯ: ‘ಕನಕಪುರ- ಮಳವಳ್ಳಿ ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರದ ಬಳಿ ಹಣವಿಲ್ಲ. ಹೀಗಾಗಿ ಯೋಜನೆ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗಂಭೀರ ಆರೋಪ ಮಾಡಿದರು.

ಬೆಂಗಳೂರು ಮತ್ತು ಮೈಸೂರು ನಡುವಿನ ರೈಲು ಮಾರ್ಗದಲ್ಲಿ ವಿಂಡೋ ಟ್ರಯಲಿಂಗ್ ಪರಿವೀಕ್ಷಣೆಗಾಗಿ ಮಂಡ್ಯ ರೈಲ್ವೆ ನಿಲ್ದಾಣಕ್ಕೆ ಗುರುವಾರ ಬಂದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

‘ನಾವು ಅಧಿಕಾರಕ್ಕೆ ಬಂದ ತಕ್ಷಣವೇ ಕನಕಪುರ- ಮಳವಳ್ಳಿ ರೈಲ್ವೆ ಮಾರ್ಗ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ರಾಜ್ಯ ಸರ್ಕಾರದಿಂದ ಸಹಕಾರ ಸಿಕ್ಕಿಲ್ಲ’ ಎಂದರು.

ಜನಸಾಮಾನ್ಯರಿಗೆ ತೊಂದರೆ ಆಗದ ರೀತಿಯಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆ ಮಾಡಲಾಗುತ್ತಿದೆ. ಮಂಡ್ಯ ನಗರಕ್ಕೆ ಬಸ್ಗಳ ವ್ಯವಸ್ಥೆ ಮತ್ತು ಮೆಮು (ಮೇನ್ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲು ಬೇಕೆನ್ನುವ ಬೇಡಿಕೆ ಇದೆ. ಮಂಡ್ಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ₹25 ಕೋಟಿ ಕೊಟ್ಟಿದ್ದಾರೆ ಎಂದು ಹೇಳಿದರು.

ಮೈಸೂರಿನಿಂದ ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಜನರಿಗೆ ತೊಂದರೆ ಆಗಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ಸಭೆ ಮಾಡಿ ಕ್ರಮ ವಹಿಸಲಾಗುತ್ತಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೂ ಚರ್ಚೆ ಮಾಡಿದ್ದು ನಿಮ್ಮ ಕನಸು ನಿವಾರಣೆ ಮಾಡುತ್ತಾರೆ ಎಂದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ಯದುವೀರ್ ಒಡೆಯರ್, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ. ತಮ್ಮಣ್ಣ ಇತರರಿದ್ದರು. ವಿಶೇಷ ರೈಲಿನ ಮೂಲಕ ಮಂಡ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು.

ನಂತರ ಸಚಿವರು ಹಾಗೂ ಅಧಿಕಾರಿಗಳು ಮಂಡ್ಯ ರೈಲ್ವೆ ನಿಲ್ದಾಣದ ಆಧುನೀಕರಣ, ಅಗತ್ಯ ಅನುದಾನ, ಕಾಮಗಾರಿ, ಸೌಲಭ್ಯ ಹಾಗೂ ರೈಲ್ವೆ ಮಾರ್ಗಗಳ ಪರಿಶೀಲಿಸಿದರು. ಅಂತೆಯೇ ಅಧಿಕಾರಿಗಳು, ಸ್ಥಳೀಯರ ಜತೆ ಸಮಾಲೋಚನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.