ಹುಬ್ಬಳ್ಳಿ: ಎಲ್ಲರಿಗೂ ಸೂರು ತಲುಪಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ತಲಾ 20 ಮನೆಗಳನ್ನು ನೀಡಲಾಗುವುದು. ನೂತನ ಗ್ರಾಮ ಪಂಚಾಯ್ತಿ ಸದಸ್ಯರು ಅರ್ಹರಿಗೆ ಮನೆಗಳನ್ನು ಹಂಚುವ ಕೆಲಸ ಮಾಡಬೇಕು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲುವು ಪಡೆದ ಧಾರವಾಡ ಜಿಲ್ಲೆಯ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ‘ಕೋವಿಡ್ ಕಾರಣದಿಂದ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆದರೂ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮನವೊಲಿಸಿ ಮುಂದಿನ ಬಜೆಟ್‌ನಲ್ಲಿ ಈ ಯೋಜನೆ ಜಾರಿಗೆ ತರುತ್ತೇನೆ.

ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರು ಹಸ್ತ ಶುದ್ಧವಾಗಿಟ್ಟುಕೊಳ್ಳಬೇಕು. ಕೇಂದ್ರದಿಂದ ನೇರವಾಗಿ ಗ್ರಾಮ ಪಂಚಾಯ್ತಿಗೆ ಬರುವ ಹಣವನ್ನು ಸಮರ್ಥವಾಗಿ ಬಳಸಿಕೊಂಡರೆ ಯಾವ ಗ್ರಾ.ಪಂ.ಗಳಿಗೂ ರಾಜ್ಯದ ನೆರವು ಬೇಕಾಗುವುದೇ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.