ಬೆಂಗಳೂರು: ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಸದ್ಯವೇ ಗೋವಿಂದರಾಜನಗರ ಕ್ಷೇತ್ರದ ತಮ್ಮ ಬೆಂಬಲಿಗರ ಸಭೆ ಕರೆದು ಮುಂದಿನ ನಡೆಯನ್ನು ತೀರ್ಮಾನಿಸಲಿದ್ದಾರೆ ಎಂದು ಅವರ ಆಪ್ತ ವಲಯ ಹೇಳಿದೆ.
ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ ಬೆನ್ನಲ್ಲೇ ಮುನಿಸಿಕೊಂಡಿರುವ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಅಥವಾ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ.