ನವದೆಹಲಿ: ಕರ್ನಾಟಕದ ಪ್ರೌಢಶಾಲೆಗಳ ಪಠ್ಯಪುಸ್ತಕಗಳಲ್ಲಿ ಎಸ್.ನಿಜಲಿಂಗಪ್ಪ ಹಾಗೂ ಕೆಂಗಲ್ ಹನುಮಂತಯ್ಯ ಅವರ ಜೀವನ–ಬದುಕು, ರಾಜ್ಯದ ಅಭಿವೃದ್ಧಿಗೆ ಅವರು ಕೈಗೊಂಡ ಕ್ರಮಗಳನ್ನು ಸೇರಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ನಿಜಲಿಂಗಪ್ಪ ಹಾಗೂ ಕೆಂಗಲ್ ಅವರ ಜನ್ಮದಿನಾಚರಣೆಗಳನ್ನು ಕರ್ನಾಟಕ ಸರ್ಕಾರದಿಂದ ಆಚರಿಸಬೇಕು. ಬೆಂಗಳೂರು ವಿವಿಯಲ್ಲಿ ಕೆಂಗಲ್ ಹಾಗೂ ದಾವಣಗೆರೆ ವಿವಿಯಲ್ಲಿ ನಿಜಲಿಂಗಪ್ಪ ಅಧ್ಯಯನ ಪೀಠಗಳನ್ನು ಆರಂಭಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.