ಬೆಂಗಳೂರು: ‘ಕಷ್ಟಕರವಾದ ಯಾವುದೇ ಮೂರು ಲೋಕಸಭಾ ಕ್ಷೇತ್ರಗಳ ಉಸ್ತುವಾರಿ ಕೊಟ್ಟರೂ ಸರಿ, ಅವುಗಳನ್ನು ಗೆಲ್ಲಿಸಿಕೊಂಡು ಬರುತ್ತೇನೆಂದು ವರಿಷ್ಠರಿಗೆ ಹೇಳಿದ್ದೇನೆ’ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ‘ವರಿಷ್ಠರನ್ನು ಶನಿವಾರ ಭೇಟಿ ಮಾಡಿದಾಗ ರಾಜ್ಯಸಭೆಗೆ ಟಿಕೆಟ್ ಕೇಳುವುದರ ಜತೆಗೆ ಮೂರು ಲೋಕಸಭಾ ಕ್ಷೇತ್ರಗಳ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನೂ ಕೇಳಿದ್ದೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಮಾಡಿ ಮಾತುಕತೆ ನಡೆಸಿದೆ. ಐದು ನಿಮಿಷ ಸಮಯ ಕೇಳಿದ್ದೆ. ಆದರೆ, ಅವರು ನನ್ನ ಜತೆ ಅರ್ಧ ಗಂಟೆ ಮಾತನಾಡಿದರು. ಇದೀಗ ಎಲ್ಲವೂ ಸುಖಾಂತ್ಯವಾಗಿದೆ. ಒಳ್ಳೆಯತನಕ್ಕೆ ಮತ್ತು ಒಳ್ಳೆಯ ನಡವಳಿಕೆಗೆ ಬೆಲೆ ಇರುತ್ತದೆ ಎಂಬುದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್ ಶಾ ಅವರು ನನ್ನ ಬಗ್ಗೆ ಸಕಾರಾತ್ಮಕವಾಗಿಯೇ ಇದ್ದರು. ಮುಂದೆ ಒಳ್ಳೆಯ ತೀರ್ಮಾನವನ್ನೇ ತೆಗೆದುಕೊಳ್ಳಲಿದ್ದಾರೆ’ ಎಂದು ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಸೋಮಣ್ಣ ಸ್ಪರ್ಧೆಗೆ ಅಭ್ಯಂತರವಿಲ್ಲ’

‘ಸೋಮಣ್ಣ ಅವರು ಹಿರಿಯರು. ಪಕ್ಷಕ್ಕೆ ಅವರದ್ದೇ ಆದ ಕೊಡುಗೆ ಇದೆ. ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ಭರವಸೆಯಿಂದ ಸ್ಪರ್ಧಿಸಿದ್ದರು. ಅವರ ಸೋಲು ನಮಗೂ ನೋವು ತಂದಿದೆ. ವರಿಷ್ಠರ ಮುಂದೆ ಅವರು ವ್ಯಕ್ತಪಡಿಸಿರುವ ಆಕಾಂಕ್ಷೆ (ರಾಜ್ಯಸಭೆ ಟಿಕೆಟ್) ಬಗ್ಗೆ ಮಾತನಾಡುತ್ತೇನೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲ. ಲೋಕಸಭೆ ಚುನಾವಣೆ ಸ್ಪರ್ಧೆಯೂ ಸೇರಿ ಯಾವುದೇ ವಿಚಾರವಾದರೂ ಸರಿ ವರಿಷ್ಠರು ಯಾವ ತೀರ್ಮಾನ ತೆಗೆದು ಕೊಳ್ಳುತ್ತಾರೋ ಅದೇ ರೀತಿ ನಡೆದುಕೊಳ್ಳುತ್ತೇನೆ’ ಎಂದು ಬಿ.ವೈ.ವಿಜಯೇಂದ್ರ ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.