ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ

Published 10 ಜುಲೈ 2024, 4:14 IST
Last Updated 10 ಜುಲೈ 2024, 4:14 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ, ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರೂ ನಾಗೇಂದ್ರ ಅವರ ಆಪ್ತ ಸಹಾಯಕರಾಗಿದ್ದರು‌.

ಬುಧವಾರ ಮುಂಜಾನೆ, ಸಿಆರ್ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ, ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ.

ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ಥ್ ನಿಯೋಜಿಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ‌ನ ಅವ್ಯವಹಾರದ ಹಿನ್ನೆಲೆಯಲ್ಲಿ ನಾಗೇಂದ್ರ ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಕ್ರಮಕ್ಕೆ ಸಂಬಂಧಿಸಿದಂತೆ ಯುನಿಯನ್ ಬ್ಯಾಂಕ್ ಕೂಡ ಜಾರಿ ನಿರ್ದೇಶನಾಯಕ್ಕೆ ದೂರು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT