ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕಲ್ಲೇಶ್ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಸಂಬಂಧ, ಕಲ್ಲೇಶ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸಿತು.
ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು, ಪ್ರತಿವಾದಿ ಇ.ಡಿ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿದರು.