ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ | ಸಿಬಿಐಗೆ ಎಲ್ಲ ರೀತಿಯ ಸಹಕಾರ: ಪರಮೇಶ್ವರ

Published 5 ಜೂನ್ 2024, 15:36 IST
Last Updated 5 ಜೂನ್ 2024, 15:36 IST
ಅಕ್ಷರ ಗಾತ್ರ

ಬೆಂಗಳೂರು: ‘ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ರಾಜ್ಯ ಸರ್ಕಾರ ಸಿಬಿಐಗೆ ಎಲ್ಲ ರೀತಿಯ ಸಹಕಾರ ನೀಡಲಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದವರು ಸಿಬಿಐಗೆ ಪತ್ರ ಬರೆದಿದ್ದರು. ₹3 ಕೋಟಿಗಿಂತ ಹೆಚ್ಚಿನ ಮೊತ್ತದ ಹಗರಣವಾಗಿದ್ದರೆ ಸಿಬಿಐ ಸ್ವಯಂಪ್ರೇರಿತ ಕೇಸ್ ದಾಖಲಿಸಬಹುದೆಂದು ಕಾನೂನು ಇದೆ. ಅದರಂತೆ ಸಿಬಿಐ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದೆ’ ಎಂದರು.

‘ಸರ್ಕಾರದ ಇಲಾಖೆಗಳಲ್ಲಿ ತನಿಖೆಗೆ ಸಂಬಂಧಿಸಿದಂತೆ ಸಿಬಿಐನಿಂದ ಪತ್ರ ಬಂದ ಬಳಿಕ ತೀರ್ಮಾನ ಮಾಡಬೇಕು. ಈ ಪ್ರಕರಣದಲ್ಲಿ ಸಚಿವರನ್ನು ಕರೆದು ಸಿಬಿಐ ವಿಚಾರಣೆ ಮಾಡಬಹುದು. ಅಗತ್ಯ ಬಂದರೆ ಪ್ರಕರಣವನ್ನು ನಾವೇ ಸಿಬಿಐಗೆ ಕೊಡುತ್ತೇವೆ. ಮೊದಲು ಸಿಬಿಐನವರು ಪತ್ರ ಬರೆಯಲಿ. ನಂತರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT