ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮದ ಹಗರಣ: ಸಚಿವ ಬಿ.ನಾಗೇಂದ್ರ ತಲೆದಂಡಕ್ಕೆ ವಾರ ಗಡುವು

Published 31 ಮೇ 2024, 0:43 IST
Last Updated 31 ಮೇ 2024, 0:43 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರನ್ನು ಜೂನ್‌ 6ರ ಒಳಗೆ ಸಂಪುಟದಿಂದ ವಜಾ ಮಾಡಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ವಿರೋಧ ಪಕ್ಷ ಬಿಜೆಪಿ, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಈ ಹಗರಣದ ವ್ಯಾಪ್ತಿ ನೆರೆಯ ರಾಜ್ಯಗಳಿಗೂ ವ್ಯಾಪಿಸಿರುವುದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ದಲಿತ ವರ್ಗದವರಿಗೆ ಸೇರಿದ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಈ ಹಣವನ್ನು ಆಂಧ್ರ ಪ್ರದೇಶ, ತೆಲಂಗಾಣ ಮುಂತಾದ ಕಡೆಗಳಲ್ಲಿ ಡ್ರಾ ಮಾಡಿಕೊಳ್ಳಲಾಗಿದೆ. ಇವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಬರದೇ ನಡೆಯಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣೆಗಾಗಿ ಹಣ ವರ್ಗಾವಣೆಯೇ: ವಿಜಯೇಂದ್ರ ಪ್ರಶ್ನೆ

ಶಿವಮೊಗ್ಗ: ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೋಕಸಭಾ ಚುನಾವಣೆಗೂ ಮುನ್ನ ಅಕ್ರಮವಾಗಿ ತೆಲಂಗಾಣಕ್ಕೆ ವರ್ಗಾವಣೆ ಆಗಿದೆ. ಇದು ಚುನಾವಣೆಯಲ್ಲಿ ಬಳಕೆಯಾಗಿರುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅನುಮಾನ ವ್ಯಕ್ತಪಡಿಸಿದರು.

ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕವು ಎಟಿಎಂ ರೀತಿ ಬಳಕೆಯಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಈ ಪ್ರಕರಣವೇ ‍ಪುರಾವೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಾಕ್ಷ್ಯ ಕೇಳುತ್ತಿದ್ದರು. ಈಗ ಸಾಕ್ಷ್ಯ ದೊರೆತಿದೆ ಎಂದು ಅವರು ಹೇಳಿದರು.

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕುರಿತಂತೆ ಸಚಿವ ಬಿ. ನಾಗೇಂದ್ರ ಅವರನ್ನು ಕರೆಯಿಸಿ ಮಾಹಿತಿ ಪಡೆಯುತ್ತೇವೆಡಿ.
ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT