ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ | ಇ.ಡಿ ದಾಳಿ ಅವಶ್ಯಕತೆ ಇರಲಿಲ್ಲ: ಡಿ.ಕೆ.ಶಿವಕುಮಾರ್

Published 10 ಜುಲೈ 2024, 13:39 IST
Last Updated 10 ಜುಲೈ 2024, 13:39 IST
ಅಕ್ಷರ ಗಾತ್ರ

ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಮನೆ ಹಾಗೂ ಇತರೆಡೆಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ) ದಾಳಿ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ತಿಪಟೂರು ತಾಲ್ಲೂಕು ನೊಣವಿನಕೆರೆ ಕಾಡಸಿದ್ಧೇಶ್ವರ ಮಠಕ್ಕೆ ಬುಧವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ಎಸ್‌ಐಟಿ ರಚಿಸಿ, ತನಿಖೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಇ.ಡಿ ಅಧಿಕಾರಿಗಳು ದಾಳಿ ಮಾಡುವ ಅಗತ್ಯತೆ ಇರಲಿಲ್ಲ. ಆದರೂ ಮಧ್ಯೆ ಪ್ರವೇಶಿಸಿದ್ದಾರೆ. ನಮ್ಮ ಎಸ್‌ಐಟಿ ಅಧಿಕಾರಿಗಳು ಸಮರ್ಥವಾಗಿ ತನಿಖೆ ಮಾಡುತ್ತಿದ್ದಾರೆ ಎಂದರು.

ನಿಗಮದಲ್ಲಿ ಅಧಿಕಾರಿಗಳು ಹಣ ದುರುಪಯೋಗ ಮಾಡಿಕೊಂಡಿರುವುದು ಗೊತ್ತಾಗಿದೆ. ಸಚಿವರು, ಶಾಸಕರ ಕೈವಾಡ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಯಾರೇ ಅಭ್ಯರ್ಥಿಯಾದರೂ ನಾನೇ ಅಭ್ಯರ್ಥಿಯಾದಂತಲ್ಲವೆ? ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT