ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ: ಮದ್ಯ, ಚಿನ್ನದ ಅಂಗಡಿಗಳಿಗೆ ಹಣ ವರ್ಗಾವಣೆ

Published 14 ಜೂನ್ 2024, 23:36 IST
Last Updated 14 ಜೂನ್ 2024, 23:36 IST
ಅಕ್ಷರ ಗಾತ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭನ್ ಅವರ ಮನೆಯಿಂದ ₹3.62 ಕೋಟಿಯನ್ನು ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

‘ನಿಗಮದ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೆ.ಜಿ. ಪದ್ಮನಾಭನ್‌ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ಅವರು ನೀಡಿದ್ದ, ಮಾಹಿತಿ ಮೇರೆಗೆ ₹3.62 ಕೋಟಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೂ ಒಟ್ಟು ₹11.83 ಕೋಟಿ ನಗದು ಹಣ ಜಪ್ತಿ ಆಗಿದೆ’ ಎಂದು ಮೂಲಗಳು ತಿಳಿಸಿವೆ.

‘ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ–ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪದಡಿ ಹೈದರಾಬಾದ್‌ನಲ್ಲಿ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಆರೋಪಿಗಳು ತೆರೆದಿದ್ದ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ನಿಗಮದ ಹಣ ಬೆಂಗಳೂರು ಮತ್ತು ಹೈದರಾಬಾದ್‌ನ ಮದ್ಯದ ಅಂಗಡಿಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ನಂತರ ಆರೋಪಿಗಳು ನಗದು ರೂಪದಲ್ಲಿ ಹಣ ಪಡೆದುಕೊಂಡಿದ್ದರು. ಈ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT