ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಶೇ7.5 ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ನಗರದಲ್ಲಿ ಮಂಗಳವಾರಬೃಹತ್ ಪ್ರತಿಭಟನೆ ನಡೆಸಿದರು.

ಮೀಸಲಾತಿಗೆ ಒತ್ತಾಯಿಸಿ ಶಕ್ತಿ ಪ್ರದರ್ಶನ ನಡೆಸಿದರು. ಪ್ರತಿಭಟನೆ ನಿರತರು ವೀರ ಮದಕರಿ ಘೋಷಣೆ ಕೂಗಿದರು. ವಾಲ್ಮೀಕಿ ಸಮುದಾಯದ ಪ್ರಸನ್ನಾನಂದ ಪುರಿ ಸ್ವಾಮೀಜಿ ಇದ್ದರು.

ಫ್ರೀಡಂ ಪಾರ್ಕ್‌ಗೆ ರಾಜ್ಯದ ವಿವಿಧ ಭಾಗಗಳಿಂದ ಬಂದ ಸಾವಿರಾರು ಮಂದಿ, ಅಲ್ಲಿಂದ ವಿಧಾನಸೌಧಕ್ಕೆ ಮೆರವಣಿಗೆ ನಡೆಸಿದರು. ವಿಧಾನಸೌಧ ಮುಂಭಾಗದ ರಸ್ತೆಯಲ್ಲಿ ಧರಣೆ ನಡೆಸಿದ್ದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಯಿತು. ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು.

ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಪ್ರತಿಭಟನೆಗೆ ಬಂದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ಶಾಸಕ ಶ್ರೀರಾಮಲು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು.

ಪ್ರತಿಭಟನೆ ವೇಳೆ ಸಚಿವ ಡಿ.ಕೆ.ಶಿವಕುಮಾರ್ ಅವರ ಕಾರು ಸಹ ರಸ್ತೆಯಲ್ಲಿ ಸಿಲುಕಿಕೊಂಡಿತ್ತು. ಹಾಗಾಗಿ, ಅವರು ಕಾರು ಇಳಿದು ಮೆಟ್ರೊದಲ್ಲಿ ಸೆಂಟ್ರಲ್ ಕಾಲೇಜ್ ವರೆಗೆ ತೆರಳಿ ನ್ಯಾಯಾಲಯಕ್ಕೆ ಹೋದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.