ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇಕಡ 7.5ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಗುರುವಾರ ಭೇಟಿಮಾಡಿ ಬೆಂಬಲ ಸೂಚಿಸಿದರು.

ವಾಲ್ಮೀಕಿ ಗುರುಪೀಠದ ಸ್ವಾಮೀಜಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 29 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಶಾಸಕರಾದ ಬೈರತಿ ಸುರೇಶ್ ಮತ್ತು ತುಕಾರಾಂ ಅವರೊಂದಿಗೆ ಸ್ವಾತಂತ್ರ್ಯ ಉದ್ಯಾನಕ್ಕೆ ಭೇಟಿನೀಡಿದ ಸಿದ್ದರಾಮಯ್ಯ, ಕೆಲಕಾಲ ಮಾತುಕತೆ ನಡೆಸಿದರು.

ಪಕ್ಷದ ಮುಖಂಡರೊಂದಿಗೆ ಪ್ರತ್ಯೇಕವಾಗಿ ಸ್ವಾತಂತ್ರ್ಯ ಉದ್ಯಾನಕ್ಕೆ ಭೇಟಿನೀಡಿದ ಹರಿಪ್ರಸಾದ್, ಪ್ರಸನ್ನಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ನಡೆಸಿದರು. ಧರಣಿನಿರತರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೋರಾಟಗಾರರ ಬೇಡಿಕೆಗಳನ್ನು ಬೆಂಬಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.