ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಸಿ ಕಚೇರಿಗಳಿಗೆ ಬಿಜೆಪಿ ಮುತ್ತಿಗೆ: ವಿಜಯೇಂದ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ
Published 26 ಜೂನ್ 2024, 16:03 IST
Last Updated 26 ಜೂನ್ 2024, 16:03 IST
ಅಕ್ಷರ ಗಾತ್ರ

ನವದೆಹಲಿ: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಸಚಿವ ಶರಣಪ್ರಕಾಶ ಪಾಟೀಲ, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಪೋಲಾಗಿದೆ; ಅದರ ದುರ್ಬಳಕೆ ಆಗಿದೆ. ಕಾಂಗ್ರೆಸ್ ಸರ್ಕಾರವು ಈ ಹಣವನ್ನು ದೋಚಿದೆ. ಇದೇ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ’ ಎಂದರು. 

‘ರಾಜ್ಯದಲ್ಲಿ ಬೆಲೆ ಏರಿಕೆಯ ಪರ್ವ ನಡೆಯುತ್ತಿದೆ. ಜನರಿಗೆ ಬರೆ ಎಳೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಜನರ ಕಿವಿಗೆ ಹೂ ಮುಡಿಸಿದ್ದಾರೆ. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ನಾಡಿನ ಜನತೆಗೆ ದ್ರೋಹ ಬಗೆಯುತ್ತಿದೆ. ನಿರಂತರ ಅನ್ಯಾಯ ಮಾಡುತ್ತಿದೆ’ ಎಂದು ಕಿಡಿಕಾರಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT