ಬೆಂಗಳೂರು: ಬೆಳಗಾವಿ–ಬೆಂಗಳೂರು, ಶ್ರೀ ಮಾತಾ ವೈಷ್ಣೋದೇವಿ ಕತ್ರಾ–ಅಮೃತಸರ ಹಾಗೂ ಅಜ್ನಿ (ನಾಗ್ಪುರ)–ಪುಣೆ ಮಾರ್ಗಗಳಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ನ ಹೊಸ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು.

ಮೋದಿ ಅವರು ನಿಲ್ದಾಣಕ್ಕೆ ಆಗಮಿಸಿದಾಗ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ವಿ. ಸೋಮಣ್ಣ ಬರಮಾಡಿಕೊಂಡರು. ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ್ದಲ್ಲದೇ ಲೋಕೋ ಪೈಲಟ್ಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ಪಿ.ಸಿ. ಮೋಹನ್, ರೈಲ್ವೆ ಮಂಡಳಿಯ ಅಧ್ಯಕ್ಷ ಸತೀಶ್ ಕುಮಾರ್, ನೈಋತ್ಯ ರೈಲ್ವೆ ಮಹಾಪ್ರಬಂಧಕ ಮುಕುಲ್ ಸರನ್ ಮಾಥುರ್ ಹಾಜರಿದ್ದರು.

ಬೆಂಗಳೂರಿನಿಂದ ಬೆಳಗಾವಿಗೆ ಹೊರಟ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಯಶವಂತಪುರ, ತುಮಕೂರು, ದಾವಣಗೆರೆ, ಹಾವೇರಿ ಮತ್ತು ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಗಳಲ್ಲಿ ಸ್ವಾಗತ ಕೋರಲಾಯಿತು. ಬೆಂಗಳೂರು–ಬೆಳಗಾವಿ ನಡುವಿನ 611 ಕಿ.ಮೀ. ದೂರವನ್ನು 8 ಗಂಟೆ 30 ನಿಮಿಷಗಳಲ್ಲಿ ರೈಲು ಕ್ರಮಿಸಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನ ವಂದೇ ಭಾರತ್ ರೈಲು ಸಂಚಾರ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.