ಬೆಂಗಳೂರು ನಗರದ ಸರ್ಕಾರಿ ಆರ್.ಸಿ. ಕಾಲೇಜು ಮತ್ತು ಸರ್ಕಾರಿ ಕಾಲೇಜುಗಳನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯದ ಘಟಕ ಕಾಲೇಜು ಆಗಿ ಪರಿವರ್ತಿಸುವ ಪ್ರಸ್ತಾವದ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಎಚ್.ಸಿ. ಮಹದೇವಪ್ಪ ಪತ್ರ ಬರೆದಿದ್ದಾರೆ. ಈ ಪ್ರಸ್ತಾವವನ್ನು ಕೈಬಿಡಬೇಕೆಂದು ವಿವಿಧ ಸಂಘಟನೆಗಳು ಸಲ್ಲಿಸಿರುವ ಮನವಿಯನ್ನು ಪರಿಗಣಿಸಬೇಕು ಎಂದೂ ಅವರು ಪತ್ರದಲ್ಲಿ ಕೋರಿದ್ದಾರೆ.