‘ಅಧಿಕಾರಿಗಳಿಂದ ವಿಳಂಬ’
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ತಿಂಗಳಿಂದ ಮನವಿ ಸಲ್ಲಿಸಿ, ವ್ಯಾಟ್‌ನಿಂದ ಜಿಎಸ್‌ಟಿ ನಡುವಿನ ವ್ಯತ್ಯಾಸ ಮೊತ್ತವನ್ನು ಸರಿಪಡಿಸಲು ಕ್ರಮ ಕೈಗೊಳ್ಳಲು ಕೇಳಿಕೊಳ್ಳಲಾಗಿತ್ತು. ನಮ್ಮ ಮನವಿಗೆ ಅವರೂ ಸಮ್ಮತಿಸಿದ್ದರು. ಆದರೆ ಹಣಕಾಸು ಇಲಾಖೆಯಲ್ಲಿ ತ್ವರಿತವಾಗಿ ಕೆಲಸವಾಗಿಲ್ಲ. ಕೇಂದ್ರ ಹಣಕಾಸು ಸಚಿವರಿಗೂ ಪತ್ರ ಬರೆದು, ನಮ್ಮ ಸಂಕಷ್ಟಕ್ಕೆ ಪರಿಹಾರ ನೀಡಲು ಕೋರಿಕೊಳ್ಳಲಾಗಿದೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ತಿಳಿಸಿದರು.