ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಅವಧಿಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ: ಮೊಯಿಲಿ

Published 20 ಜನವರಿ 2024, 16:12 IST
Last Updated 20 ಜನವರಿ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಮುಖ್ಯಮಂತ್ರಿಯಾಗಿದ್ದಾಗ  ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗ 2ಬಿ ಎಂದು ವಿಂಗಡಿಸಿ, ಶೇ 6ರಷ್ಟು ಮೀಸಲಾತಿ ನೀಡಿ ಆದೇಶ ಹೊರಡಿಸಲಾಗಿತ್ತು. ಆಗ ಜನತಾದಳ ಸರ್ಕಾರ ಅಧಿಕಾರದಲ್ಲಿ ಇರಲಿಲ್ಲ’ ಎಂದು ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯಿಲಿ ತಿಳಿಸಿದ್ದಾರೆ.

‘ನನ್ನ ಅವಧಿಯಲ್ಲೇ ಚಿನ್ನಪ್ಪರೆಡ್ಡಿ ಆಯೋಗದ ವರದಿ ಅನುಷ್ಠಾನ ಮಾಡಲಾಗಿತ್ತು’

‘ಒಟ್ಟು ಮೀಸಲಾತಿ ಪ್ರಮಾಣ ಶೇ 50 ಮೀರ ಬಾರದೆಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕ ಮುಸ್ಲಿಮರ ಮೀಸಲಾತಿಯನ್ನು ಶೇ 6ರಿಂದ ಶೇ 4ಕ್ಕೆ ಇಳಿಸಲಾಯಿತು. ಈ ಆದೇಶವನ್ನು ಕೂಡಾ ನಾನು ಮುಖ್ಯಮಂತ್ರಿ ಆಗಿದ್ದಾಗಲೇ ಹೊರಡಿಸಲಾಗಿತ್ತು. ಈ ಮೀಸಲಾತಿಯು ರಾಜಕೀಯ, ಶೈಕ್ಷಣಿಕ ಮತ್ತು ಉದ್ಯೋಗಕ್ಕೆ ಅನ್ವಯಿಸಲಾಯಿತು. ಈ ಬಗ್ಗೆ ನಾನಾ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವುದರಿಂದ, ಗೊಂದಲ ಉಂಟಾಗಬಾರದೆಂದು ಈ ಸ್ಪಷ್ಟೀಕರಣ ನೀಡುತ್ತಿದ್ದೇನೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT