ಬೆಂಗಳೂರು: ಜಾತಿವಾರು ಸಮೀಕ್ಷೆ ವೇಳೆ ಲಿಂಗಾಯತ ವೀರಶೈವ ಸಮುದಾಯದ ಯಾರೂ, ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಬಾರದು. ಬದಲಿಗೆ ‘ವೀರಶೈವ ಲಿಂಗಾಯತ’ ಎಂದು ಬರೆಯಿಸಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರೆ ನೀಡಿದೆ.

ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಬಿ.ಖಂಡ್ರೆ ಅವರು, ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಕರೆ ನೀಡಿದರು. ‘ಹಿಂದೂ ಸನಾತನ ಧರ್ಮಕ್ಕೂ, ವೀರಶೈವ ಲಿಂಗಾಯತ ಧರ್ಮಕ್ಕೂ ಸಂಬಂಧವಿಲ್ಲ. ಹೀಗಾಗಿ ನಮ್ಮ ಸಮುದಾಯದ ಎಲ್ಲರೂ, ತಾವು ‘ವೀರಶೈವ ಲಿಂಗಾಯತ’ ಧರ್ಮದವರು ಎಂದೇ ಬರೆಸಬೇಕು’ ಎಂದು ಹೇಳಿದರು.

‘ಜಾತಿಗಳ ಕಾಲಂನಲ್ಲಿ ‘ಲಿಂಗಾಯತ’ ಅಥವಾ ‘ವೀರಶೈವ’ ಅಥವಾ ‘ವೀರಶೈವ ಲಿಂಗಾಯತ’ ಎಂದು ಬರೆಸಬೇಕು. ಉಪಜಾತಿಯ ಕಾಲಂನಲ್ಲಿ, ನಿಮ್ಮ ಉಪಜಾತಿಗಳ ಹೆಸರನ್ನು ಸ್ಪಷ್ಟವಾಗಿ ಬರೆಸಬೇಕು. ಗಣತಿದಾರರು ಸರಿಯಾಗಿ ಮಾಹಿತಿ ದಾಖಲಿಸಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದರು.
.ಬೆಂಗಳೂರಿನಲ್ಲೂ 20ರಿಂದ ಜಾತಿವಾರು ಸಮೀಕ್ಷೆ: ಡಾ.ಜಿ.ಜಗದೀಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.