ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಟಿ ಲೀಲಾವತಿ ಮನವಿ: ಸ್ಪಂದಿಸಿದ ಡಿಕೆಶಿ

Published 14 ಅಕ್ಟೋಬರ್ 2023, 14:40 IST
Last Updated 14 ಅಕ್ಟೋಬರ್ 2023, 14:40 IST
ಅಕ್ಷರ ಗಾತ್ರ

ಬೆಂಗಳೂರು: ಸೋಲದೇವನಹಳ್ಳಿಯಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟನೆ ಹಾಗೂ ನಿವೇಶನ ನೋಂದಣಿ ವಿಚಾರವಾಗಿ ನಟಿ ಲೀಲಾವತಿ ಮತ್ತು ಅವರ ಮಗ ವಿನೋದ್ ರಾಜ್ ಮಾಡಿದ ಮನವಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದರು.

ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಲೀಲಾವತಿ ಮತ್ತು ವಿನೋದ್ ರಾಜ್ ಶನಿವಾರ ಬಂದು ಚರ್ಚೆ ನಡೆಸಿದರು.

ಈ ವೇಳೆ ಮಾತನಾಡಿದ ಶಿವಕುಮಾರ್‌, ‘ಪ್ರಾಣಿಗಳ ರಕ್ಷಣೆ ಈ ತಾಯಿ ಮತ್ತು ಮಗನ ನೆಚ್ಚಿನ ಹವ್ಯಾಸ. ಪಶುವೈದ್ಯಕೀಯ ಆಸ್ಪತ್ರೆ ಉದ್ಘಾಟನೆಗೆ ದಿನಾಂಕ ನೀಡುವಂತೆ ಅವರು ನನಗೆ ಕೇಳಿದ್ದಾರೆ. ನಾನು ಸಮಯ ನೋಡಿ ದಿನಾಂಕ ನೀಡುತ್ತೇನೆ. ಅವರಿಗೆ ನಿಗದಿಯಾಗಿರುವ ನಿವೇಶನ ನೋಂದಣಿ ವಿಚಾರವಾಗಿಯೂ ಮನವಿ ಸಲ್ಲಿಸಿದ್ದಾರೆ. ಈ ವಿಚಾರದಲ್ಲಿಯೂ ಸಹಕಾರ ನೀಡುತ್ತೇನೆ’ ಎಂದರು.

ಆರೋಗ್ಯ ವಿಚಾರಿಸಿದ ಡಿಸಿಎಂ: ಕಾರಿನಲ್ಲಿಯೇ ಕುಳಿತಿದ್ದ ಲೀಲಾವತಿ ಅವರ ಬಳಿಗೆ ತೆರಳಿ ಆರೋಗ್ಯ ವಿಚಾರಿಸಿದ ಶಿವಕುಮಾರ್‌, ‘ನಿಮ್ಮ ಆರೋಗ್ಯ ಸರಿ ಇಲ್ಲದ ಕಾರಣ ಇಷ್ಟು ದೂರ ಬರುವುದು ಬೇಡ ಎಂದು ಹೇಳಿದ್ದೆ. ಆದರೂ ಬಂದಿದ್ದು ಸಂತಸವಾಯಿತು. ನೀವು ಹೇಳಿದ ದಿನ ಬಂದು ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ’ ಎಂದು ಭರವಸೆ ನೀಡಿದರು.

ವಿನೋದ್ ರಾಜ್ ಪ್ರತಿಕ್ರಿಯಿಸಿ, ‘ನಾವು ಸುಸಜ್ಜಿತವಾದ ಪಶು ಚಿಕಿತ್ಸೆ ಆಸ್ಪತ್ರೆ ನಿರ್ಮಿಸಿದ್ದು, ಅದಕ್ಕೆ ಸಿಬ್ಬಂದಿಯನ್ನು ಸರ್ಕಾರದಿಂದ ನಿಯೋಜಿಸುವಂತೆ ಮನವಿ ಸಲ್ಲಿಸಿದ್ದೇವೆ. ಸೊಂಡೆಕೊಪ್ಪ ಬಳಿ ವಿದ್ಯುತ್ ಸಬ್‌ಸ್ಟೇಷನ್ ಕಾಮಗಾರಿ ಶೇ 99ರಷ್ಟು ನಿರ್ಮಾಣವಾಗಿದ್ದು, ಬಳಿಕ ನಿಂತು ಹೋಗಿದೆ. ಅದನ್ನು ಕಾರ್ಯಗತಗೊಳಿಸಿದರೆ ಆ ಭಾಗದ ರೈತರಿಗೆ ಉಪಯೋಗವಾಗುತ್ತದೆ. ಅದನ್ನೂ ಶಿವಕುಮಾರ್‌ ಗಮನಕ್ಕೆ ತಂದಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT