ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶೋಕ ವಿರುದ್ಧ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್‌ ಆಗ್ರಹ

Published 23 ಫೆಬ್ರುವರಿ 2024, 16:00 IST
Last Updated 23 ಫೆಬ್ರುವರಿ 2024, 16:00 IST
ಅಕ್ಷರ ಗಾತ್ರ

ಬೆಂಗಳೂರು: ‘ಬಜರಂಗದಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೆ’ ಎಂದು ವಿಧಾನಸಭೆಯಲ್ಲಿ ಹೇಳಿರುವ ಆರ್‌. ಅಶೋಕ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕಿತ್ತು ಹಾಕುವಂತೆ  ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ವಿಶ್ವ ಹಿಂದೂ ಪರಿಷತ್‌ ಆಗ್ರಹಿಸಿದೆ.

ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ನೇತೃತ್ವದ ನಿಯೋಗವು ವಿಜಯೇಂದ್ರ ಅವರನ್ನು ಗುರುವಾರ ಭೇಟಿ ಮಾಡಿ, ಮನವಿ ಸಲ್ಲಿಸಿದೆ. ಬಜರಂಗದಳದ ಪ್ರಾಂತ ಸಂಯೋಜಕ ಕೆ.ಆರ್‌. ಸುನಿಲ್‌, ವಿಭಾಗ ಸಂಯೋಜಕರಾದ ಗೋವರ್ಧನ್‌ ಸಿಂಗ್‌ ಮತ್ತು ಶಿವಕುಮಾರ್‌ ನಿಯೋಗದಲ್ಲಿದ್ದರು.

‘ಹಿಂದುತ್ವದ ಪರವಾಗಿ ಮಾತನಾಡಬೇಕಿರುವ ವಿರೋಧ ಪಕ್ಷದ ನಾಯಕರ ಈಗಿನ ಹೇಳಿಕೆಯಿಂದ ಹಿಂದುತ್ವ ಪರ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ. ಬಜರಂಗದಳ ಕಾರ್ಯಕರ್ತರನ್ನು ಗೂಂಡಾಗಳಿಗೆ ಹೋಲಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಲ್ಲದೇ ಈಗ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಖಂಡನೀಯ’ ಎಂದು ವಿಶ್ವ ಹಿಂದೂ ಪರಿಷತ್‌ ಹೇಳಿದೆ.

ಈ ವಿಷಯವನ್ನು ಪಕ್ಷದ ಹಿರಿಯರು, ಶಾಸಕರು ಮತ್ತು ನಾಯಕರ ಗಮನಕ್ಕೆ ತರಬೇಕು. ಅಶೋಕ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನದಿಂದ ತೆಗೆದು ಹಾಕಬೇಕು. ಬಜರಂಗದಳದ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಅವರು ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT