ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂತ್ರಸ್ತೆ ಅಸಹಾಯಕತೆ ಪರಿಗಣನೆ: ಪೋಕ್ಸೊ ಪ್ರಕರಣ ರದ್ದು

Published 26 ಫೆಬ್ರುವರಿ 2024, 15:30 IST
Last Updated 26 ಫೆಬ್ರುವರಿ 2024, 15:30 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಕಿಯನ್ನು ವಿವಾಹವಾಗಿ, ಆಕೆ ಗಂಡು ಮಗುವಿಗೆ ಜನ್ಮ ನೀಡಲು ಕಾರಣವಾದ 20ರ ಹರೆಯದ ಯುವಕನೊಬ್ಬನ ವಿರುದ್ಧ ದಾಖಲಾಗಿದ್ದ ಪೋಕ್ಸೊ ಕ್ರಿಮಿನಲ್ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಸಂಬಂಧದ ಆರೋಪ ರದ್ದುಗೊಳಿಸುವಂತೆ ಕೋರಿ ಯುವಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನ ಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

‘ಕಾನೂನಿನ ಅರಿವಿಲ್ಲದೆ ಯುವಕ ಹಾಗೂ ಮಗಳ ಮದುವೆ ಅನೀರಿಕ್ಷಿತವಾಗಿ ನಡೆದಿದೆ. ಮಗಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ವಿವಾಹದ ವಯಸ್ಸು ತಲುಪಿದ ಕೂಡಲೇ ದಂಪತಿ ಕಾನೂನುಬದ್ಧವಾಗಿ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಾರೆ’ ಎಂದು ಬಾಲಕಿ ಹಾಗೂ ಆಕೆಯ ತಾಯಿ ಜಂಟಿಯಾಗಿ ಸಲ್ಲಿಸಿದ್ದ ಪ್ರಮಾಣ ಪತ್ರವನ್ನು ನ್ಯಾಯಪೀಠ ಪರಿಗಣಿಸಿದೆ.

‘ಈ ಪ್ರಕರಣದಲ್ಲಿ ತಾಯಿ ಹಾಗೂ ಮಗುವಿನ ಜೀವನೋಪಾಯ ಅರ್ಜಿದಾರ ಯುವಕನ ಮೇಲೆಯೇ ಅವಲಂಬಿತವಾಗಿರುವುದು ಗಮನಾರ್ಹ’ ಎಂದಿರುವ ನ್ಯಾಯಪೀಠ ಯುವಕನನ್ನು ಆರೋಪಗಳಿಂದ ಮುಕ್ತಗೊಳಿಸಿದೆ.

ಆರೋಪಿ ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 366 (ಎ), 376 (1), ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ -2012ರ ಕಲಂ 4, 6 ಮತ್ತು ಬಾಲ್ಯ ವಿವಾಹ ಕಾಯ್ದೆ-2006ರ ಕಲಂ 9ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT