ಬೆಂಗಳೂರು: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
.ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು.
ಸಂಸದ ಕೋಟ ಶ್ರೀನಿವಾಸಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಗಳು ಬಿಜೆಪಿ ಭದ್ರಕೋಟೆಗಳು ಎಂಬುದು ಮತ್ತೆ ಸಾಬೀತಾಗಿದೆ. ಅಲ್ಲದೆ, ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇದು ಉತ್ತೇಜನ ಕೊಡಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
.ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿ.ಪಿ. ಯೋಗೇಶ್ವರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.