ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಗದೀಶ ಶೆಟ್ಟರ್‌ ರಾಜೀನಾಮೆ: ಜುಲೈ 12ಕ್ಕೆ ಪರಿಷತ್‌ ಉಪಚುನಾವಣೆ

Published 18 ಜೂನ್ 2024, 23:30 IST
Last Updated 18 ಜೂನ್ 2024, 23:30 IST
ಅಕ್ಷರ ಗಾತ್ರ

ನವದೆಹಲಿ: ಜಗದೀಶ ಶೆಟ್ಟರ್‌ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ನ ಸ್ಥಾನಕ್ಕೆ ಜುಲೈ 12ರಂದು ಚುನಾವಣೆ ನಡೆಯಲಿದೆ. 

ಬಿಜೆಪಿಗೆ ಸೇರುವ ಉದ್ದೇಶದಿಂದ ಶೆಟ್ಟರ್ ಅವರು ಪರಿಷತ್ ಸ್ಥಾನಕ್ಕೆ ಜನವರಿ 25ರಂದು ರಾಜೀನಾಮೆ ನೀಡಿದ್ದರು. ಅವರ ಅವಧಿ 2028ರ ಜೂನ್‌ 14ರ ತನಕ ಇತ್ತು.

ಪಕ್ಷದ ಅಭ್ಯರ್ಥಿಯನ್ನಾಗಿ ಹಂಪನಗೌಡ ಬಾದರ್ಲಿ ಕಾಂಗ್ರೆಸ್‌ ಪಕ್ಷ ಈಗಾಗಲೇ ಘೋಷಿಸಿದೆ. ರಾಯಚೂರಿನವರಾದ ಬಾದರ್ಲಿ ಅವರು ರಾಜ್ಯ ಯುವ ಕಾಂಗ್ರೆಸ್‌ ಸಮಿತಿಯ ಮಾಜಿ ಅಧ್ಯಕ್ಷ. 

ಜುಲೈ 2ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. 3ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 5ರಂದು ನಾಮಪತ್ರ ವಾಪಸ್‌ ಪಡೆಯಲು ಕಡೆಯ ದಿನ. ಜುಲೈ 12ರಂದು ಸಂಜೆ 5ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT