ರಾಮನಗರ: ‘ಬಿಜೆಪಿಯು ಸ್ವಂತ ಶಕ್ತಿಯ ಮೇಲೆ ಚುನಾವಣೆ ಎದುರಿಸಲಿದ್ದು, ನಮಗೆ ಬೇರೆ ಪಕ್ಷಗಳ ಬೆಂಬಲದ ಅವಶ್ಯಕತೆ ಇಲ್ಲ’ ಎಂದು ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂಬ ಕಾಂಗ್ರೆಸ್‌ನ ಆರೋಪ ಕುರಿತು ಮಾಗಡಿಯಲ್ಲಿ ಬುಧವಾರ ಅವರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು.

‘ವಿರೋಧ ಪಕ್ಷಗಳು ಇಂತಹ ಆರೋಪ ಮಾಡುವುದು ಸಾಮಾನ್ಯ. ಆದರೆ, ನಮಗೆ ಅಂತಹ ಅವಶ್ಯಕತೆ ಇಲ್ಲ. ಪಕ್ಷದ ಮುಖಂಡರೆಲ್ಲ ಸೇರಿ ಅಭ್ಯರ್ಥಿಗಳ ಪರ ರಾಜ್ಯದಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನಗಳಲ್ಲಿ ಗೆಲ್ಲಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.