ಬೆಂಗಳೂರು: ‘ಇನ್ನು ಮುಂದೆ ಮಾಧ್ಯಮ ಪ್ರತಿನಿಧಿಗಳು ವಿಧಾನಸೌಧದ ಒಳಗೆ ನಿಗದಿತ ಸ್ಥಳದಲ್ಲಿ ಮಾತ್ರ ಹೇಳಿಕೆಗಳನ್ನು ಪಡೆಯಬೇಕು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಗಣ್ಯರು ವಿಧಾನಸೌಧ ಪ್ರವೇಶಿಸುವಾಗ ಅವರನ್ನು ಹಿಂಬಾಲಿಸಿ ವಿಡಿಯೊ ಹೇಳಿಕೆ ಪಡೆಯಲು ಅವಕಾಶ ಇಲ್ಲ’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಫರ್ಮಾನು ಹೊರಡಿಸಿದೆ.

ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಬರೆದಿದ್ದ ಪತ್ರವನ್ನು ಉಲ್ಲೇಖಿಸಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ನಿರ್ದೇಶಕರಿಗೆ ಡಿಪಿಎಆರ್ ಕಾರ್ಯದರ್ಶಿ ಈ ಕುರಿತು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?: ‘ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಬರೆದಿರುವ ಪತ್ರದಲ್ಲಿನ ಕೋರಿಕೆಯ ಮೇರೆಗೆ ವಾರ್ತಾ ಮತ್ತು ಪ್ರಚಾರ ಇಲಾಖೆಯು ಶಿಫಾರಸು ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಡಿಪಿಎಆರ್ (ಕಾರ್ಯಕಾರಿ) ಗುರುತಿನ ಚೀಟಿ ವಿತರಿಸುತ್ತಿದೆ. ಈ ಗುರುತಿನ ಚೀಟಿ ಹೊಂದಿರುವ ಎಲ್ಲ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳು, ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧದ ಪಶ್ಚಿಮ ದ್ವಾರದ ಪೋರ್ಟಿಕೊ ಬಳಿ ನಿಗದಿಪಡಿಸಿರುವ ಸ್ಥಳದಲ್ಲಿ ಮಾತ್ರ ಹೇಳಿಕೆಗಳನ್ನು (ಬೈಟ್) ಪಡೆದುಕೊಳ್ಳಬೇಕು. ವಿಧಾನಸೌಧದ ಒಳಗೆ ಪ್ರವೇಶಿಸುವ ಸಂದರ್ಭದಲ್ಲಿ ಹೇಳಿಕೆಯನ್ನು ತೆಗೆದುಕೊಳ್ಳಲು, ಸಂದರ್ಶನ ನಡೆಸಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಗಣ್ಯರನ್ನು ಹಿಂಬಾಲಿಸದಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು’ ಎಂದು ಪತ್ರದಲ್ಲಿ ಡಿಪಿಎಆರ್ ಕಾರ್ಯದರ್ಶಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.