ಬೆಂಗಳೂರು: ‘ಪೋಷಕರನ್ನು ಆರೈಕೆ ಮಾಡದಿದ್ದರೆ ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ವಿಲ್ ಅಥವಾ ದಾನಪತ್ರ ರದ್ದು ಮಾಡಲು ಅವಕಾಶವಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೇಂದ್ರ ಸರ್ಕಾರ 2007ರಲ್ಲಿ ಜಾರಿಗೆ ತಂದಿರುವ ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼಯಲ್ಲಿ ಈ ಅಂಶವಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿ ಇಲ್ಲ’ ಎಂದರು.

‘ಈ ಕಾಯ್ದೆ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ತಿಂಗಳ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರಿಕರು ಕಾಯ್ದೆಯ ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು’ ಎಂದು ತಿಳಿಸಿದರು.

‘ತಂದೆ– ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರು ಸ್ಥಾಪಿಸಲು ಈ ಕಾಯ್ದೆಯಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ’ ಎಂದರು.

‘ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಕೂಡಾ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘ವರ್ಷದೊಳಗೆ ಇ- ಜಮಾಬಂದಿ ತಂತ್ರಾಂಶ’

‘ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ಒಂದು ವರ್ಷದೊಳಗೆ ಅಭಿವೃದ್ಧಿಪಡಿಸಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನ ಪರಿಷತ್ನಲ್ಲಿ ಜೆಡಿಎಸ್ನ ಟಿ.ಎನ್. ಜವರಾಯಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಮಂಡಿಸಿದ ಬಜೆಟ್ನಲ್ಲಿ ಇ- ಜಮಾಬಂದಿ ಘೋಷಿಸಿದ್ದಾರೆ. ಇದರಿಂದ ಗ್ರಾಮ ಲೆಕ್ಕಿಗರ ಮೇಲಿನ ಕೆಲಸದ ಒತ್ತಡ ಕಡಿಮೆ ಆಗಲಿದೆ’ ಎಂದರು.

‘ಇ-ಜಮಾಬಂದಿ ಎಂದರೆ ಜಮಾಬಂದಿಯ ಆನ್ಲೈನ್ ಆವೃತ್ತಿ. ಇದು ಹಕ್ಕುಗಳ ದಾಖಲೆ ಅಥವಾ ಭೂ ಮಾಲೀಕತ್ವದ ದಾಖಲೆಗಳಿಗೆ ಅಧಿಕೃತ ದೃಢೀಕರಣ ನೀಡುತ್ತದೆ. ಹರಿಯಾಣ ಸೇರಿದಂತೆ ಇತರ ರಾಜ್ಯಗಳು ಈಗಾಗಲೇ ಜಮಾಬಂದಿಯ ವಿದ್ಯುನ್ಮಾನ ಆವೃತ್ತಿಯನ್ನು ಅಭಿವೃದ್ಧಿಪಡಿಸಿ ಯಶಸ್ವಿ ಆಗಿವೆ’ ಎಂದರು.

‘ವರ್ಷದೊಳಗೆ 2.30 ಲಕ್ಷ ಮನೆಗಳ ನಿರ್ಮಾಣ’

‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಒಂದು ವರ್ಷದೊಳಗೆ 2.30 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುವುದು’ ಎಂದು ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ಬಿಜೆಪಿಯ ಕೆ.ಎಸ್. ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ‘ರಾಜ್ಯ ಕೊಳೆಗೇರಿ ಅಭಿವೃದ್ದಿ ಮಂಡಳಿಯಿಂದ 1.80 ಲಕ್ಷ ಮನೆಗಳು ಮಂಜೂರಾಗಿದ್ದು ಮೊದಲ ಹಂತದಲ್ಲಿ 36789 ಎರಡನೇ ಹಂತದಲ್ಲಿ 39843 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ. ಉಳಿದ 1.30 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿವೆ’ ಎಂದರು. ‘ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ 46 ಸಾವಿರ ಮನೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು. ಈವರೆಗೂ ಬಾಕಿಯಿರುವ 9.50 ಲಕ್ಷ ಮನೆಗಳ ನಿರ್ಮಾಣಕ್ಕೆ ₹13500 ಕೋಟಿ ವೆಚ್ಚವಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.