ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ-ಜೆಡಿಎಸ್‌ನ ಜನತಂತ್ರ ವಿರೋಧಿ ಧೋರಣೆ ವಿರೋಧಿಸಿ ಮೈಸೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನಾಂದೋಲನ ಸಮಾವೇಶಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಎಲ್ಲ ಸಚಿವರು ತೆರಳಿದ್ದರು. ಇತ್ತ ಆಡಳಿತ ಕೇಂದ್ರಗಳಲ್ಲಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯ ಹಾಜರಾತಿಯೂ ಶೇ 50ರಷ್ಟೂ ಇರಲಿಲ್ಲ.