ಹೊಸಪೇಟೆ: ಒಳ ಮೀಸಲಾತಿ ಇಲ್ಲದೆ ನೇಮಕಾತಿ ಖಚಿತ ಎಂಬ ಕಾನೂನು ಸಚಿವ ಎಚ್.ಕೆ.ಪಾಟೀಲಹೇಳಿಕೆಯನ್ನು ವಿಜಯನಗರ ಜಿಲ್ಲಾ ಮಾದಿಗ ಮಹಾಸಭಾದ ಅಧ್ಯಕ್ಷ ಎಚ್.ಶೇಷು ಖಂಡಿಸಿದ್ದು, ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಶುಕ್ರವಾರ ಇಲ್ಲಿ ಹೇಳಿಕೆ ನೀಡಿದ ಅವರು, ಒಳ ಮೀಸಲಾತಿಯು ಪರಿಶಿಷ್ಟ ಜಾತಿಯಲ್ಲಿನ ಸಮುದಾಯಗಳ ಹಕ್ಕು, ಅದಕ್ಕಾಗಿ ಹೋರಾಟ ಮಾಡುವ ಸಂದರ್ಭದಲ್ಲಿ ಈ ಹೇಳಿಕೆಯು ಜಾತಿ ಜಾತಿಗಳ ನಡುವಿನ ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

‘ಸಚಿವರ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಮಾದಿಗ ಸಮುದಾಯವು ಸಮಾಜದಲ್ಲಿ ಶೋಷಿತ, ಅಸ್ಪೃಶ್ಯ ಸಮುದಾಯವಾಗಿದ್ದು, ಒಳ ಮೀಸಲಾತಿಯು ಯಾವ ಜಾತಿಯವರಿಗೆ ಬೇಕಿಲ್ಲವೋ ಅವರನ್ನು ಹೊರತುಪಡಿಸಿ ಮಾದಿಗ ಸಮುದಾಯಕ್ಕೆ ಶೇ 6ರಷ್ಟನ್ನು ನೀಡಿ’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-25-1285089520

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.