ವಿಜಯಪುರ: ‘ಭಾರತದ ಇತಿಹಾಸದಲ್ಲಿ ರಾಜಮಾತಾ ಅಹಿಲ್ಯಾಬಾಯಿ ಹೋಳ್ಕರ್ ಅವರು ನಡೆಸಿದ 35 ವರ್ಷಗಳ ಸುಧೀರ್ಘ ಆಡಳಿತ ಕಾಲವನ್ನು ಸುವರ್ಣ ಯುಗ ಎಂದು ಕರೆಯಲಾಗುತ್ತದೆ. ಅಹಿಲ್ಯಾಬಾಯಿ ಅವರು ಸಮರ್ಥ ಆಡಳಿತಗಾರರಾಗಿದ್ದರು. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ, ಮಹಿಳಾ ಸೈನ್ಯವನ್ನು ಕಟ್ಟಿದರು.’ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ಅಹಿಲ್ಯಾಬಾಯಿ ಹೋಳ್ಕರ್ ವೃತ್ತದಲ್ಲಿ ಭಾನುವಾರ ರಾಜಮಾತಾ ಅಹಿಲ್ಯಾಬಾಯಿ ಹೋಳ್ಕರ್ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಅಹಿಲ್ಯಾಬಾಯಿ ಅವರು ಕೃಷಿ, ವ್ಯಾಪಾರ ಮತ್ತು ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದ್ದರು. ಉತ್ತಮ ಆಡಳಿತ, ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಸಾಮಾಜಿಕ ಕಾರ್ಯಗಳಿಗೆ ಪ್ರಸಿದ್ಧರಾಗಿದ್ದರು. ಅವರ ಜನಪರ ಹಾಗೂ ದೈವಿಕ ಕಾರ್ಯಗಳನ್ನು ಪರಿಗಣಿಸಿ ಲೋಕಮಾತಾ ಎಂದು ಗೌರವದಿಂದ ಕರೆಯಲಾಗುತ್ತದೆ’ ಎಂದು ತಿಳಿಸಿದರು.

‘ನಗರದಲ್ಲಿ ಸಂಗೊಳ್ಳಿ ರಾಯಣ್ಣ ಅವರ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ರಾಜ್ಯದಲ್ಲಿಯೇ ದಾಖಲೆ ಆಗುವ ರೀತಿಯಲ್ಲಿ ಜನಸ್ತೋಮ ಸೇರಿಸಿ ಅನಾವರಣ ಮಾಡಲಾಗುವುದು’ ಎಂದರು.

‘ಮಹಾರಾಷ್ಟ್ರಕ್ಕೆ ಸೀಮಿತವಾಗಿದ್ದ ಹಿಂದೂ ಧರ್ಮ ರಕ್ಷಕಿ ಅಹಿಲ್ಯಾಬಾಯಿ ಹೋಳ್ಕರ್ ಅವರ ಇತಿಹಾಸ ರಾಜ್ಯದಲ್ಲಿಯೂ ಪ್ರಚುರಪಡಿಸಲು ಅವರ ಹೆಸರನ್ನು ವೃತ್ತಕ್ಕೆ ಇಡಲಾಗಿದೆ. ರಾಯಣ್ಣರ ಮೂರ್ತಿಯನ್ನೂ ಪ್ರತಿಷ್ಠಾಪಿಸಲಾಗುವುದು’ ಎಂದು ತಿಳಿಸಿದರು.

ಸಮುದಾಯದ ಮುಖಂಡರನ್ನು ಸನ್ಮಾನಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಪಾಲಿಕೆ ಸದಸ್ಯರಾದ ರಾಜಶೇಖರ ಕುರಿ, ಪ್ರೇಮಾನಂದ ಬಿರಾದಾರ, ಜವಾಹರ ಗೋಸಾವಿ, ರಾಹುಲ್ ಜಾಧವ, ಮಾಜಿ ಉಪಮೇಯರ್ ರಾಜೇಶ ದೇವಗಿರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-19-497809097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.