ವಿಜಯಪುರ: ‘ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ಪಂಡಿತ ದೀನದಯಾಳ ಉಪಾಧ್ಯಾಯರ ತ್ಯಾಗ ಮತ್ತು ಬಲಿದಾನದಿಂದ ಬಿಜೆಪಿ ಇಂದು ಪ್ರಪಂಚದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ನಗರದ ಸಾಯಿ ವಿಹಾರ ಕಲ್ಯಾಣ ಮಂಟಪದಲ್ಲಿ ಶನಿವಾರ ಪಂಡಿತ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ -2026 ಅಂಗವಾಗಿ ಬಿಜೆಪಿ ವಿಜಯಪುರ ನಗರ ಮಂಡಲ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಎರಡು ಸಂಸದರಿಂದ ಆರಂಭವಾದ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಳೆದ 12 ವರ್ಷಗಳಿಂದ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದು ಹೆಮ್ಮರವಾಗಿ ಬೆಳೆದಿದೆ’ ಎಂದರು.

‘ಬಿಜೆಪಿಯಲ್ಲಿರುವ ಶಿಸ್ತು, ಧ್ಯೇಯ ಹಾಗೂ ಸಂಘಟನೆ ಇತರೆ ಪಕ್ಷಗಳಲ್ಲಿ ಇಲ್ಲ. ಕಾರ್ಯಕರ್ತರ ಶ್ರಮದ ಮೇಲೆ ವಿಶ್ವಾಸವಿದ್ದು 2028ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ನಾನು ಸಂಸದನಾದ ಮೇಲೆ ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಸುಮಾರು ₹1.20 ಲಕ್ಷ ಕೋಟಿ ಅನುದಾನ ತಂದಿದ್ದೇನೆ. ಇಷ್ಟು ದೊಡ್ಡ ಮೊತ್ತದ ಅನುದಾನ ಯಾರೂ ತರಲಿಲ್ಲ’ ಎಂದು ಹೇಳಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ‘ಪ್ರಶಿಕ್ಷಣ ಅಭಿಯಾನ ಮೊದಲು ರಾಜ್ಯ ಮಟ್ಟದಲ್ಲಿ ನಡೆಯತ್ತಿದ್ದವು. ಈಗ ಪ್ರತಿ ಮಂಡಲ ಮಟ್ಟದಲ್ಲಿ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ, ಪಂಡಿತ ದೀನದಯಾಳ ಉಪಾಧ್ಯಾಯ, ಶಾಮಪ್ರಸಾದ ಮುಖರ್ಜಿ ಅವರು ಜನಸಂಘ ಸಂಘಟಿಸಿದ ಮೊದಲಿಗರು. ಮೊದಲು ದೇಶ ಆನಂತರ ಪಕ್ಷ ಎಂಬ ಸಿದ್ಧಾಂತ ಹೊಂದಿದ ಬಿಜೆಪಿ ದೇಶದ ಹಿತ ಕಾಯುವ ಪಕ್ಷ’ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ, ಚಂದ್ರಶೇಖರ ಕವಟಗಿ, ಸತ್ಯನಾರಾಯಣ ಹೇಮಾದ್ರಿ, ಸುರೇಶ ಬಿರಾದಾರ್, ವೀವೇಕಾನಂದ ಡಬ್ಬಿ, ಮುಳುಗೌಡ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-26-1884020191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.