ವಿಜಯಪುರ: ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರನ್ನುಕಾಂಗ್ರೆಸ್ ಮತ ಬ್ಯಾಂಕ್ ಮಾಡಿಕೊಂಡಿದೆಯೇ ಹೊರತು ಅವರಿಗಾಗಿ ಶ್ರಮಿಸುತ್ತಿಲ್ಲ ಎಂದು ಅಹಿಂದ ಮುಖಂಡ ಗೌಡಪ್ಪ ಬಡಿಗೇರ ಆರೋಪಿಸಿದರು.

ಈ ಹಿಂದೆ ಮುಸ್ಲಿಂ ಬಾಹುಳ್ಯ ಕ್ಷೇತ್ರವಾದ ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇದ್ದಾಗ ಮುಂದಿನ ಬಾರಿ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದಾಗ ಅಹಿಂದ ವರ್ಗಗಳೆಲ್ಲ ಸೇರಿ ಶಾಮನೂರು ಶಿವಶಂಕರಪ್ಪ ಅವರನ್ನು ಗೆಲ್ಲಿಸಿದ್ದರು. ಅವರ ನಿಧನದ ನಂತರ ತೆರವಾದ ಈ ಕ್ಷೇತ್ರಕ್ಕೆ ಮುಸ್ಲಿಮರಿಗೆ ಟಿಕೆಟ್ ನಿರಾಕರಿಸಿದ್ದು, ಸದ್ಯ ಕಾಂಗ್ರೆಸ್ ಕಾರ್ಯಕರ್ತರ ಪಕ್ಷವಾಗಿರದೆ ಪಿತ್ರಾರ್ಜಿತ ಆಸ್ತಿಯಾಗಿದೆ. ಪ್ರಜಾಪ್ರಭುತ್ವದ ಬಗ್ಗೆ ಹೇಳುವ ಕಾಂಗ್ರೆಸ್ ಪಕ್ಷ ವಂಶಪಾರಂಪರ್ಯ ಆಡಳಿತವನ್ನೇ ಮುಂದುವರೆಸಿಕೊಂಡು ಬಂದಿದೆ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.

ಇತ್ತೀಚೆಗೆ ಮೀಸಲಾತಿ ಹಂಚಿಕೆಯ ವಿಷಯದಲ್ಲೂ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸದೆ ತಮ್ಮ ನಿರ್ಧಾರವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ದಲಿತರಲ್ಲಿ ವಿನಾಕಾರಣ ಗೊಂದಲ ಮೂಡಿಸುತ್ತಿದೆ. ಹಾಗಾಗಿ ಉಪ ಚುನಾವಣೆಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಅಹಿಂದ ವರ್ಗದವರೆಲ್ಲ ಒಗ್ಗಟ್ಟಿನಿಂದ ಕಾಂಗ್ರೆಸ್ ಅನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕೆಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-26-1203324472

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.