ವಿಜಯಪುರ: ‘ಮೂರು ವರ್ಷ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ 300 ವೈಫಲ್ಯಗಳನ್ನು ಕಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಣ್ಣನ ಕೊರಳಿಗೆ ಈ ವೈಫಲ್ಯಗಳ ಹಾರ ಹಾಕುತ್ತೇನೆ’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ, ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದೆ, ಕೇವಲ ಕುರ್ಚಿ ಕಿತ್ತಾಟದಲ್ಲಿ ಕಾಲ ಹರಣ ಮಾಡುತ್ತಿದ್ದಾರೆ. ಮೂರು ವರ್ಷದ ಸಾಧನೆ ಶೂನ್ಯ’ ಎಂದು ಆರೋಪಿಸಿದರು.

‘ರಾಜ್ಯದ ಒಟ್ಟು ಸಾಲ ₹5.18 ಲಕ್ಷ ಕೋಟಿಯಿಂದ ₹7.64 ಲಕ್ಷ ಕೋಟಿಗೆ ಏರಿದೆ. ಒಂದೇ ವರ್ಷದಲ್ಲಿ ₹ 1.16 ಲಕ್ಷ ಕೋಟಿ ಸಾಲ ಮಾಡಿದೆ, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದೆ’ ಎಂದು ಆರೋಪಿಸಿದರು.

‘ಮುಡಾ ನಿವೇಶನ ಹಂಚಿಕೆ ಹಗರಣ, ವಾಲ್ಮೀಕಿ ನಿಗಮದಲ್ಲಿ ದಲಿತರ ಹಣ ಲೂಟಿ, ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಬಿಬಿಎಂಪಿ ಗುತ್ತಿಗೆದಾರರ ಕಮಿಷನ್ ಹಾವಳಿ, ಕಾರ್ಮಿಕ ಇಲಾಖೆಯಲ್ಲಿ ಕಿಟ್ ಹಗರಣ, ಕೆಐಎಡಿಬಿ ಭೂಪರಿಹಾರ ಹಗರಣ, ಭೋವಿ ಅಭಿವೃದ್ಧಿ ನಿಗಮದಲ್ಲಿ ನಕಲಿ ಸಾಲ ಹಗರಣ, ಬಿಬಿಎಂಪಿ ಕಸ ವಿಲೇವಾರಿ ಟೆಂಡರ್ ಹಗರಣ ಸೇರಿದಂತೆ ಹತ್ತಾರು ಹಗರಣಗಳು ಬೆಳಕಿಗೆ ಬಂದಿರುವುದೇ ಈ ಸರ್ಕಾರದ ಸಾಧನೆ’ ಎಂದರು.

‘ರೈತರ ಕೃಷಿ ಪಂಪ್ಸೆಟ್ಗಳಿಗೆ 7 ಗಂಟೆ ತ್ರೀಫೇಸ್ ವಿದ್ಯುತ್ ನೀಡಲು ವಿಫಲವಾಗಿದೆ. ವಿದ್ಯುತ್ ಪರಿವರ್ತಕ ಬದಲಾವಣೆಗೆ ತಿಂಗಳುಗಟ್ಟಲೆ ವಿಳಂಬ ಮಾಡಲಾಗುತ್ತಿದೆ. ಪಿಎಂ ಕುಸುಮ್ ಯೋಜನೆಯಡಿ ಶೂನ್ಯ ಸಾಧನೆ ಮಾಡಲಾಗಿದೆ’ ಎಂದು ದೂರಿದರು.

‘ನೀರಾವರಿಗೆ ಸಂಬಂಧಿಸಿದಂತೆ ಯುಕೆಪಿ ಮೂರನೇ ಹಂತದ ಜಾರಿಗೆ ನಿರ್ಲಕ್ಷ್ಯ ವಹಿಸಲಾಗಿದೆ. ಆಲಮಟ್ಟಿ ಜಲಾಶಯದ ಭೂಸ್ವಾಧೀನಕ್ಕೆ ₹50 ಸಾವಿರ ಕೋಟಿ ಬೇಕಿದ್ದರೂ ಕೇವಲ ₹5 ಸಾವಿರ ಕೋಟಿ ಹಂಚಿಕೆ ಮಾಡಲಾಗಿದೆ. ಮೇಕೆದಾಟು ಯೋಜನೆಗೆ ಅನುದಾನವನ್ನೇ ನೀಡಿಲ್ಲ, ಮಹದಾಯಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡಲಾಗುತ್ತಿದೆ. ಭದ್ರಾ ಮೇಲ್ದಂಡೆ ಕಾಮಗಾರಿ ಸ್ಥಗಿತವಾಗಿದೆ’ ಎಂದು ಆರೋಪಿಸಿದರು.

‘ಜಲಜೀವನ ಮಿಷನ್ ಕಾಮಗಾರಿ ತೀವ್ರ ವಿಳಂಬವಾಗಿದೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಸಂಪೂರ್ಣ ಕಡಿತ ಮಾಡಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಅನುದಾನ ಕಡಿತ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಭರವಸೆ ಹುಸಿಯಾಗಿದೆ’ ಎಂದು ದೂರಿದರು.

‘ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಕುಸಿತವಾಗಿದೆ. ಶಿಕ್ಷಕರ ಹುದ್ದೆಗಳ ಕೊರತೆ ಇದ್ದು, ಭರ್ತಿ ಮಾಡಲು ಸರ್ಕಾರ ಕ್ರಮಕೈಗೊಂಡಿಲ್ಲ, ಎನ್ಇಪಿ ರದ್ದು ಮತ್ತು ಎಸ್ಇಪಿ ಗೊಂದಲ ಬಗೆಹರಿದಿಲ್ಲ. ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ಯೋಜನೆ ರದ್ದು ಮಾಡಲಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ರಾಜಕೀಯ ಮಾಡಲಾಗುತ್ತಿದೆ’ ಎಂದು ಆಕ್ಷೇಪಿಸಿದರು.

ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಸಂಜೀವ ಐಹೊಳಿ, ಕಾಸುಗೌಡ ಬಿರಾದಾರ, ಈರಣ್ಣ ರಾವೂರ, ವಿಜಯ್ ಜೋಶಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-26-433405156

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.