ವಿಜಯಪುರ: ಆಲಮೇಲ ತಾಲ್ಲೂಕಿನ ಮೋರಟಗಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಮನೆಯ ಚಾವಣಿ ಕುಸಿದು ಅವಶೇಷಗಳ ಅಡಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.

ಅವಘಡದಲ್ಲಿ ದಂಪತಿಯಾದ ಗುರುನಾಥ ಬಡಿಗೇರ(35), ಜ್ಯೋತಿ ಬಡಿಗೇರ(28) ಮತ್ತು ಅವರ ಮಕ್ಕಳಾದ ಕಾಳಮ್ಮ ಬಡಿಗೇರ(13) ಹಾಗೂ ಕೀರ್ತಿ ಬಡಿಗೇರ(9) ಸಾವಿಗೀಡಾಗಿದ್ದಾರೆ.

ಮೃತ ಗುರುನಾಥ ಬಡಿಗೇರ ಅವರ ತಾಯಿ ಶಾಂತಾಬಾಯಿ ಮತ್ತು ಮತ್ತೊಬ್ಬ ಮಗ ವೀರೇಶ(10) ಇನ್ನೊಂದು ಮನೆಯಲ್ಲಿ ಮಲಗಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.

ಗುರುನಾಥ ಬಡಿಗೇರ ದಂಪತಿ ತಮ್ಮ ಮನೆಯ ದುರಸ್ಥಿ ಹಿನ್ನೆಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ತಮ್ಮ ಮನೆಗೆ ಮರಳುವವರಿದ್ದರು. ಆದರೆ, ವಿಧಿಯಾಟಕ್ಕೆ ಕುಟುಂಬ ಬಲಿಯಾಗಿದೆ.

ಸಚಿವರಿಂದ ಸಾಂತ್ವಾನ:

ಘಟನಾ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಪರಿಶೀಲನೆ ನಡೆಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಪರಿಹಾರ ಘೋಷಣೆ:

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ, ಈ ದುರ್ಘಟನೆ ನಡೆಯಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಸಾವಿಗೀಡಾದ ನಾಲ್ಕು ಜನರ ಕುಟುಂಬಕ್ಕೆ ತಲಾ ₹ 5 ಲಕ್ಷದಂತೆ ಒಟ್ಟು ₹ 20 ಲಕ್ಷ ಪರಿಹಾರ ನೀಡಲಾಗುವುದು ಮತ್ತು ಬದುಕುಳಿದಿರುವ ಬಾಲಕ ವೀರೇಶ ಬಡಿಗೇರ ವಿದ್ಯಾಭ್ಯಾಸಕ್ಕೆ ನೆರವಾಗುವುದಾಗಿ ಹೇಳಿದರು.

ಪರಿಹಾರದ ಹಣವನ್ನು ಬಾಲಕನ ಹೆಸರಿನಲ್ಲಿ ಬ್ಯಾಂಕಿನಲ್ಲಿ ಠೇವಣಿ ಇಡಲಾಗುವುದು ಎಂದರು.

ಸಿಂದಗಿ ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕ ರಮೇಶ ಭೂಸನೂರ, ಜಿ. ಪಂ. ಮಾಜಿ ಸದಸ್ಯ ನರಸಿಂಗ ಪ್ರದಾದ ತಿವಾರಿ, ಮುಖಂಡ ಅಶೋಕ ವಾರದ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಆರೋಗ್ಯಾಧಿಕಾರಿ ಸಂಪತಕುಮಾರ ಗುಣಾರಿ ಹಾಗೂ ಕಂದಾಯ, ಪೊಲೀಸ್, ಅಗ್ನಿ ಶಾಮಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.