ವಿಜಯಪುರ: ರಾಜ್ಯ ಸರ್ಕಾರವು 2026–27ನೇ ಹಣಕಾಸು ವರ್ಷದಿಂದ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಜಾಹೀರಾತು ನೀತಿ–2026ಕ್ಕೆ ರಾಜ್ಯದ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ಈ ನೀತಿಯಲ್ಲಿ ಅಳವಡಿಸಿರುವ ಅನೇಕ ಅಂಶಗಳು ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಬೆಳವಣಿಗೆಗೆ ಮಾರಕವಾಗಿದ್ದು, ಅವುಗಳ ಅಸ್ತಿತ್ವಕ್ಕೂ ಧಕ್ಕೆಯುಂಟು ಮಾಡುವ ಸಾಧ್ಯತೆ ಇದೆ ಎಂದು ಸಂಘಟನೆ ಆತಂಕ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ದಶಕಗಳಿಂದ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿವೆ. ಆದರೆ, ಹೊಸ ಜಾಹೀರಾತು ನೀತಿಯಲ್ಲಿ ಈ ಪತ್ರಿಕೆಗಳ ಹಿತಾಸಕ್ತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಲಾಗಿದೆ.

ವಿಶೇಷವಾಗಿ, ಈ ನೀತಿಯನ್ನು ರೂಪಿಸುವ ವೇಳೆ ಯಾವುದೇ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದೆ ಏಕಪಕ್ಷೀಯವಾಗಿ ತಯಾರಿಸಿರುವುದು ವಿಷದನೀಯವಾಗಿದೆ ಎಂದು ತಿಳಿಸಿದೆ.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಯಡಳ್ಳಿ, ಇರ್ಪಾನ್ ಶೇಖ, ಪತ್ರಕರ್ತರಾದ ಮೋಹನ ಕುಲಕರ್ಣಿ, ರಶ್ಮಿ ಪಾಟೀಲ, ಪಾಂಡುರಂಗ ಮಮದಾಪುರ, ಮಹೇಶ ಶೆಟಗಾರ, ಮಾಧವರಾವ ಕುಲಕರ್ಣಿ, ಸುಶೀಲೇಂದ್ರ ನಾಯಕ, ಸೀತಾರಾಮ ಕುಲಕರ್ಣಿ, ಇಂದುಶೇಖರ ಮಣೂರ, ಸಂಜೀವ ಕುಲಕರ್ಣಿ, ಶರಣು ಮಸಳಿ, ಕೆ. ಕೆ. ಕುಲಕರ್ಣಿ, ಗುರು ಗದ್ದನಕೇರಿ, ಫಯಾಜ್ ಕಲಾದಗಿ, ಕೌಶಲ್ಯ ಪನಾಳಕರ, ರಾಜು ಢವಳಗಿ, ಸಂಜಯ ಕೊಂಡಗೂಳಿ, ಪುಂಡಲಿಕ ಮುರಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-26-2011951167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.