ವಿಜಯಪುರ: ‘ಶಾಲಾವರಣದಲ್ಲಿ ಎಲ್ಲರೂ ಒಂದೇ ಎಂಬ ಭಾವನೆ ಮಕ್ಕಳಲ್ಲಿ ಬರಲಿ ಎಂಬ ಕಾರಣಕ್ಕೆ ಸಮವಸ್ತ್ರ ಪದ್ಧತಿ ಇದೆ. ಆದರೆ, ಶಾಲಾ ಸಮವಸ್ತ್ರವನ್ನು ಇರಿಸಿಕೊಂಡು ಮತ ರಾಜಕಾರಣಲ್ಲಿ ಕಾಂಗ್ರೆಸ್ ತೊಡಗಿದೆ, ಭಾರತೀಯ ಸಂವಿಧಾನದ ಸಮ ಭಾವವನ್ನು ಹಾಳು ಮಾಡುತ್ತಿದೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಆರೋಪಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮವಸ್ತ್ರ ಸಂಹಿತೆ ಸಂಬಂಧಿಸಿದಂತೆ ಮೂರು ವರ್ಷದ ಹಿಂದಿನ ಸುತ್ತೋಲೆ ಈಗ ಏಕೆ ರದ್ದುಗೊಳಿಸಿದ್ದೀರಿ? ನಿಗದಿಪಡಿಸಿದ ಸಮವಸ್ತ್ರದ ಜೊತೆಗೆ ಸೀಮಿತ ಸಂಪ್ರದಾಯದ ವಸ್ತ್ರಗಳನ್ನು ಧರಿಸುವ ದ್ವಂದ್ವ ನೀತಿ ಏನಿದು? ಶಾಲೆಗಳನ್ನು ನಿಮ್ಮ ಕಲುಷಿತ ರಾಜಕಾರಣದ ತಾಣವಾಗಿಸಬೇಡಿ ಎಂದರು.

‘ಸಮವಸ್ತ್ರದ ವಿಷಯದಲ್ಲಿ ಶಿಕ್ಷಣ ಸಚಿವರು ಸೂತ್ರದ ಗೊಂಬೆಯಾಗಿದ್ದಾರೆ’ ಎಂದು ಹೇಳಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-26-1794396998

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.