ವಿಜಯಪುರ : ‘ಜಾತಿ ಸಮೀಕ್ಷೆ ಪ್ರಕ್ರಿಯೆ ಪೂರ್ಣಗೊಂಡು, ಜಾರಿಯಾಗುವವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರಲಿ. ಅಲ್ಲಿಯವರೆಗೆ ಅವರನ್ನು ಅಧಿಕಾರದಲ್ಲಿ ಮುಂದುವರೆಸಬೇಕು’ ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಮನವಿ ಮಾಡಿದರು.

‘ಜಾತಿ ಸಮೀಕ್ಷೆ ವರದಿ ಅನುಷ್ಠಾನಕ್ಕೆ ಬರಬೇಕು. ನಾವು ಡಿ.ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ವಿರೋಧಿಗಳಲ್ಲ. ಜಾತಿ ಸಮೀಕ್ಷೆ ಅನುಷ್ಠಾನ ಆಗುವವರೆಗೂ ಅದರ ಬಗ್ಗೆ ಸಂಪೂರ್ಣ ಮುತವರ್ಜಿ ವಹಿಸುತ್ತಲೇ ಬಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನೇ ಅಧಿಕಾರದಲ್ಲಿ ಮುಂದುವರೆಸಬೇಕು ಎಂಬುದಷ್ಟೇ ನಮ್ಮ ಆಗ್ರಹ’ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ತೆಲಂಗಾಣ, ಕೇರಳ ಮೊದಲಾದ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಸಿದ್ಧರಾಮಯ್ಯ ಮಾತ್ರ ಅಹಿಂದ ಮುಖ್ಯಮಂತ್ರಿ. ಹೀಗಾಗಿ ಅಹಿಂದ ಸಿದ್ಧಾಂತವೇ ಕಾಂಗ್ರೆಸ್ ಉಸಿರು, ಸಿದ್ಧರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಅಹಿಂದ ಆಶಯಕ್ಕೆ ದೊಡ್ಡ ಹಿನ್ನೆಡೆಯಾಗಲಿದೆ, ಇನ್ನು ಸಿದ್ಧರಾಮಯ್ಯ ಅವರನ್ನು ಕೆಳಗಿಳಿಸುವ ಪ್ರಯತ್ನ ನಡೆಯುತ್ತಿರುವುದು ಏಕೆ? ಎಂಬ ಪ್ರಶ್ನೆಯನ್ನು ಕೇವಲ ಅಹಿಂದ ವರ್ಗ ಅಷ್ಟೇ ಅಲ್ಲ ರಾಜ್ಯದ ಜನತೆಯೇ ಕೇಳುತ್ತಿದ್ದಾರೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಒಕ್ಕೂಟದ ಪ್ರಮುಖರಾದ ಬೀರಪ್ಪ ಜುಮನಾಳ, ಸಂಜು ಕಂಬಾಗಿ, ಫಯಾಜ್ ಕಲಾದಗಿ, ರಜಾಕ್ಸಾಬ್ ಕಾಖಂಡಕಿ, ಮಲ್ಲು ಬಿದರಿ ಮೊದಲಾದವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-26-820039927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.