ವಿಜಯಪುರ: ರಾಜ್ಯದಲ್ಲಿ ಜಾರಿಗೆ ತರಲು ಮುಂದಾಗಿರುವ ಎಸ್ಐಆರ್ ಪ್ರಕ್ರಿಯೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಎಸ್ಐಆರ್ ವಿರೋಧಿ ಜಾತ್ಯತೀತ ಸಂಘಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು.

ಅಹಿಂದ ಮುಖಂಡ ಎಸ್.ಎಂ.ಪಾಟೀಲ ಗಣೀಹಾರ ಮಾತನಾಡಿ, ‘ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಅನಗತ್ಯ ದಾಖಲೆಗಳನ್ನು ಕಡ್ಡಾಯಗೊಳಿಸಿರುವುದು ಬಡಜನರಿಗೆ ಸಂಕಷ್ಟ ಉಂಟುಮಾಡಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಗ್ರಾಮೀಣ ಭಾಗದ ಜನರಿಗೆ ಜನನ ಪ್ರಮಾಣಪತ್ರ, ಭೂ ದಾಖಲೆ, ಶಿಕ್ಷಣ ದಾಖಲೆಗಳನ್ನು ಒದಗಿಸುವುದು ಕಷ್ಟಕರವಾಗಿದೆ. ಇದರಿಂದ ಸಾವಿರಾರು ಜನರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ. ಚುನಾವಣಾ ಆಯೋಗ ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು’ ಎಂದು ಆಗ್ರಹಿಸಿದರು.

ಶ್ರೀನಾಥ ಪೂಜಾರಿ ಮಾತನಾಡಿ, ‘ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹೆಸರಿನಲ್ಲಿ ಜಾರಿಗೊಳಿಸಲಾಗುತ್ತಿರುವ ಎಸ್ಐಆರ್ ಕ್ರಮವು ಸಾಮಾನ್ಯ ಜನರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರವು ತಕ್ಷಣ ಕೇಂದ್ರ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿ ಈ ಅವೈಜ್ಞಾನಿಕ ಹಾಗೂ ಜನವಿರೋಧಿ ಕ್ರಮವನ್ನು ಹಿಂಪಡೆಯುವಂತೆ ಆಗ್ರಹಿಸಬೇಕು’ ಎಂದರು.

‘ಎಸ್ಐಆರ್ ಕ್ರಮವನ್ನು ಸರ್ಕಾರ ತಕ್ಷಣ ಹಿಂಪಡೆಯದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಆರತಿ ಶಹಾಪುರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮೇಜಾ ನಧಾಫ್, ಸುರೇಶ ಬಿಜಾಪುರ, ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅತ್ತಾಉಲ್ಲಾ ದ್ರಾಕ್ಷಿ, ಎಸ್ಯುಸಿಐ ಮುಖಂಡ ಬಿ.ಭಗವಾನ ರೆಡ್ಡಿ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ, ಶಿವಬಾಳಮ್ಮ, ಆಪ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೊಗೆಶ ಸೊಲ್ಲಾಪುರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-26-1633826871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.