ಮೈಸೂರು: ‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುವ ಸಮಯ ಬಂದಿದೆ. ಇದನ್ನೇ, ದಿನಾಂಕ ನಿಗದಿಯಾಗಿಲ್ಲ ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಹೇಳಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಬಿ.ವೈ. ವಿಜಯೇಂದ್ರ ತಿಳಿಸಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕುರ್ಚಿಗಾಗಿ ದಿನವೂ ಕಿತ್ತಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾಂಗ್ ಮೊದಲು ನವದೆಹಲಿಗೆ ಹೋದರೆ, ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಗ್ಯಾಂಗ್ ಹೋಗುತ್ತಿದೆ. ಇವರಿಬ್ಬರ ಜಗಳದಲ್ಲಿ ನನಗೇನಾದರೂ ಲಾಭ ಆಗುತ್ತದೆಯೇ ಎಂದು ಮಲ್ಲಿಕಾರ್ಜುನ ಖರ್ಗೆ ಕೂಡ ಟವೆಲ್ ಹಾಕಿದ್ದಾರೆ’ ಎಂದು ಟೀಕಿಸಿದರು.

‘ರಾಜ್ಯದಲ್ಲಿರುವುದು ಮಾನವೀಯತೆ ಇಲ್ಲದ ಭ್ರಷ್ಟ ಸರ್ಕಾರ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ಆ ಪಕ್ಷದ ಮುಖಂಡರೇ ಹೇಳುತ್ತಿದ್ದಾರೆ. ಇದು ಆ ಪಕ್ಷದ ಸ್ಥಿತಿ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.