ಶಿವಮೊಗ್ಗ: 'ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ನಂತರವೂ ಕಾಂಗ್ರೆಸ್ನಲ್ಲಿ ನಾಯಕತ್ವದ ಗೊಂದಲ ಮುಂದುವರೆಯಲಿದ್ದು, ರಾಜ್ಯದಲ್ಲಿ ಅವಧಿಗೆ ಮುನ್ನವೇ ವಿಧಾನಸಭೆ ಚುನಾವಣೆ ನಡೆಯಲಿದೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯದಲ್ಲಿ ಆಡಳಿತ ಕುಸಿದಿದೆ. ಸರ್ಕಾರದ ವೈಫಲ್ಯ ಕಾಂಗ್ರೆಸ್ ಹೈಕಮಾಂಡ್ನ ಗಮನಕ್ಕೆ ಬಂದಿದೆ. ಹೀಗಾಗಿಯೇ ಆ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಮಾಡಿದ್ದಾರೆ ಎಂದರು.

ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಮುಖ್ಯವಲ್ಲ. ಸಿದ್ದರಾಮಯ್ಯ ₹10 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಅದನ್ನು ಮತ್ತೆ ಹಳಿಗೆ ತರುವ ಬಹುದೊಡ್ಡ ಸವಾಲು ಮುಂದೆ ಬರುವವರಿಗೆ ಎದುರಾಗಲಿದೆ ಎಂದು ಹೇಳಿದರು.
.ರಾಜೀನಾಮೆಗೆ ಸಿದ್ದರಾಮಯ್ಯ ಅಣಿ: ಡಿಕೆಶಿ ಪಟ್ಟಕ್ಕೆ ಕಾಂಗ್ರೆಸ್ ವರಿಷ್ಠರ ತಯಾರಿ.ನಾಳೆ ರಾಜ್ಯಪಾಲ ಗೆಹಲೋತ್ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ.
ಈ ಸರ್ಕಾರ ವಿಪರೀತ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿಯೇ ಉಪ ಚುನಾವಣೆಯಲ್ಲಿ ಗೆದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ವ್ಯಂಗ್ಯವಾಡಿದರು.

ಮೋದಿ ಸಾರ್ವಕಾಲಿಕ ದಾಖಲೆ

'ಸತತ 12 ವರ್ಷ ಆಡಳಿತ ನಡೆಸಿದ ಏಕೈಕ ಚುನಾಯಿತ ಪ್ರಧಾನಿ ಎಂಬ ಶ್ರೇಯ ಈಗ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಅವರು ಸಾರ್ವಕಾಲಿಕ ದಾಖಲೆ ಬರೆದಿದ್ದಾರೆ' ಎಂದು ಹರ್ಷ ವ್ಯಕ್ತಪಡಿಸಿದ ವಿಜಯೇಂದ್ರ, 'ಪ್ರಧಾನಿ ಆಗಿ ಆರಂಭದಲ್ಲಿ ಸವಾಲುಗಳ ಎದುರಿಸದ ನರೇಂದ್ರ ಮೋದಿ, ನಂತರ ಯಾವುದೇ ಹಗರಣಗಳು ಇಲ್ಲದೇ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದಾರೆ. ಇದು ಶ್ಲಾಘನೀಯ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.